Saturday, October 1, 2022

Latest Posts

ಗಣರಾಜ್ಯೋತ್ಸವ ಪರೇಡ್‌ಗೆ ಬನ್ನಿ: ಸೆಂಟ್ರಲ್‌ ವಿಸ್ತಾ ಯೋಜನೆಯ ಕಾರ್ಮಿಕರಿಗೆ ಪ್ರಧಾನಿ ಮೋದಿ ಆಹ್ವಾನ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 
ಸೆಂಟ್ರಲ್‌ ವಿಸ್ತಾ ಅವೆನ್ಯೂವನ್ನು ಪ್ರಧಾನಿ ನರೇಂದ್ರ ಮೋದಿ ಗುರುವಾರ ಅನಾವರಣ ಮಾಡಿದರು.

ನೇತಾಜಿ ಪ್ರತಿಮೆಯನ್ನು ಪ್ರಧಾನಿ ಮೋದಿ ಅನಾವರಣಗೊಳಿಸಿದರು. ಬಳಿಕ ಹೊಸ ಸೆಂಟ್ರಲ್ ವಿಸ್ಟಾ ಅವೆನ್ಯೂದಲ್ಲಿನ ವಸ್ತು ಪ್ರದರ್ಶನ ಕೇಂದ್ರಕ್ಕೆ ಭೇಟಿ ನೀಡಿದರು. ಈ ಸಮಯದಲ್ಲಿ, ಅವರು ಜನವರಿ 26 ರಂದು ಗಣರಾಜ್ಯೋತ್ಸವ ಪರೇಡ್‌ಗೆ ಸೆಂಟ್ರಲ್ ವಿಸ್ಟಾದ ಪುನರಾಭಿವೃದ್ಧಿ ಯೋಜನೆಯಲ್ಲಿ ಕೆಲಸ ಮಾಡುವ ಎಲ್ಲ ಜನರನ್ನು ಆಹ್ವಾನಿಸುವುದಾಗಿ ಘೋಷಣೆ ಮಾಡಿದರು.

ಇದೇ ವೇಳೆ ಸೆಂಟ್ರಲ್‌ ವಿಸ್ತಾ ಯೋಜನೆಯಲ್ಲಿ ಶ್ರಮವಹಿಸಿದ್ದ ಕಾರ್ಮಿಕರ ಜೊತೆ ಮಾತನಾಡಿದರು. ಜನವರಿ 26ರ ಗಣರಾಜ್ಯೋತ್ಸವ ಪರೇಡ್‌ಗೆ ಶ್ರಮಜೀವಿಗಳನ್ನು ಆಹ್ವಾನಿಸುವುದು ಹೆಮ್ಮೆಯ ವಿಚಾರ ಎಂದು ಪ್ರಧಾನಿ ಈ ವೇಳೆ ಹೇಳಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ತಮ್ಮ ಬೆಂಗಾಲವಲು ಪಡೆಯೊಂದಿಗೆ ಸೆಂಟ್ರಲ್‌ ವಿಸ್ತಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕರ್ತವ್ಯ ಪಥವನ್ನು ತಲುಪಿತ್ತು. ಅವರೊಂದಿಗೆ ಅಮಿತ್ ಶಾ, ಧರ್ಮೇಂದ್ರ ಪ್ರಧಾನ್, ಗಜೇಂದ್ರ ಚೌಹಾಣ್, ಪ್ರಧಾನಿ ಆರ್ಥಿಕ ಮಂಡಳಿ ಸದಸ್ಯ ಕೆ ಸಂಜೀವ್ ಸನ್ಯಾಲ್ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!