ದೇವಾಲಯಕ್ಕೆ ಬಂದು ಕ್ಷಮೆಯಾಚಿಸು, ಇಲ್ಲವೇ ಐದು ಕೋಟಿ ಕೊಡು: ಸಲ್ಲುಗೆ ಮತ್ತೆ ಕೊಲೆ ಬೆದರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಗ್ಯಾಂಗ್ ​ಸ್ಟರ್ ಲಾರೆನ್ಸ್​ ಬಿಷ್ಣೋಯ್​ನಿಂದ ಕೊಲೆ ಬೆದರಿಕೆಗಳನ್ನು ಎದುರಿಸುತ್ತಿರುವ ಬಾಲಿವುಡ್ ನಟ ಸಲ್ಮಾನ್ ಖಾನ್​ ಅವರಿಗೆ ಇದೀಗ ಲಾರೆನ್ಸ್​ ಬಿಷ್ಣೋಯ್ ಸಹೋದರ ಕೂಡ ಹೊಸ ಬೆದರಿಕೆ ಹಾಕಿದ್ದಾನೆ.

ಸೋಮವಾರ ತಡರಾತ್ರಿ ವರ್ಲಿ ಪ್ರದೇಶದಲ್ಲಿರುವ ಮುಂಬೈ ಸಂಚಾರ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಬಂದಿದೆ ಅಧಿಕಾರಿಗಳು ಹೇಳಿದ್ದಾರೆ.

ಸಲ್ಮಾನ್ ಖಾನ್ ದೇವಸ್ಥಾನಕ್ಕೆ ಹೋಗಿ ತಪ್ಪಾಯ್ತು ಎಂದು ಕ್ಷಮೆ ಕೇಳಬೇಕು ಅಥವಾ 5 ಕೋಟಿ ರೂ. ಕೊಡಬೇಕು. ಈ ರೀತಿ ಮಾಡದಿದ್ದರೆ ನಾವು ಅವರನ್ನು ಕೊಲೆ ಮಾಡುತ್ತೇವೆ, ನಮ್ಮ ಗ್ಯಾಂಗ್ ಇನ್ನೂ ಸಕ್ರಿಯವಾಗಿದೆ ಎಂದು ತಿಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಬೆದರಿಕೆ ಹಾಕಿರುವ ವ್ಯಕ್ತಿ ಲಾರೆನ್ಸ್ ಬಿಷ್ಣೋಯ್ ಸಹೋದರ ಎಂದು ಹೇಳಿಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಬೆದರಿಕೆ ಸಂಬಂಧ ಅಧಿಕಾರಿಗಳು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

 

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!