Friday, September 30, 2022

Latest Posts

ಹಾಸ್ಯಗಾರ ಮುನಾವರ್‌ ಫರೂಕಿ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿದ ದೆಹಲಿ ಪೋಲೀಸರು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ದೆಹಲಿಯಲ್ಲಿ ಆ.28ರಂದು ನಡೆಯಬೇಕಿದ್ದ ಸ್ಟ್ಯಾಂಡಪ್‌ ಕಾಮಿಡಿಯನ್‌ ಮುನ್ನಾವರ್‌ ಫರೂಕಿ ಅವರ ಕಾರ್ಯಕ್ರಮಕ್ಕೆ ದೆಹಲಿ ಪೋಲೀಸರು ಅನುಮತಿ ನಿರಾಕರಿಸಿದ್ದಾರೆ. ಅವರ ಈ ಕಾರ್ಯಕ್ರಮವು ಕೋಮು ಸೌಹಾರ್ದತೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಅನುಮತಿ ನಿರಾಕರಣೆ ಮಾಡಲಾಗಿದೆ ಎಂದು ಮೂಲಗಳು ವರದಿ ಮಾಡಿವೆ.

ಕಾರ್ಯಕ್ರಮವು ಕೇದಾರನಾಥ ಸಾಹ್ನಿ ಆಡಿಟೋರಿಯಂನಲ್ಲಿ ಮಧ್ಯಾಹ್ನ 2 ರಿಂದ ರಾತ್ರಿ 9.30 ರವರೆಗೆ ನಡೆಯಬೇಕಿತ್ತು. ಕಾರ್ಯಕ್ರಮವನ್ನು ಖಾಸಗಿಯವರು ಆಯೋಜಿಸಿದ್ದರು ಎನ್ನಲಾಗಿದೆ.

ಈ ಹಿಂದೆ ಫರೂಕಿಯವರು ಹಿಂದೂ ದೇವತೆಗಳು ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಬಿಜೆಪಿ ನೀಡಿದ ದೂರಿನ ಆಧಾರದ ಮೇಲೆ ಅವರನ್ನು ಮಧ್ಯಪ್ರದೇಶ ಪೊಲೀಸರು ಬಂಧಿಸಿದ್ದರು. ಬಳಿಕ ಜಾಮೀನಿನ ಮೇಲೆ ಫರೂಕಿ ಬಿಡುಗಡೆಯಾಗಿದ್ದರು.

ಈ ವರ್ಷದ ಆರಂಭದಲ್ಲಿ, ಮೇ ತಿಂಗಳಲ್ಲಿ, ಕಂಗನಾ ರಣಾವತ್ ಹೋಸ್ಟ್ ಮಾಡಿದ ರಿಯಾಲಿಟಿ ಶೋ ‘ಲಾಕ್-ಅಪ್’ ನಲ್ಲಿ ಫರುಕಿ ಭಾಗವಹಿಸಿದ್ದರು ಮತ್ತು 18 ಲಕ್ಷಕ್ಕೂ ಹೆಚ್ಚು ಮತಗಳನ್ನು ವಿಜೇತರಾಗಿದ್ದರು.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!