ಹಾಸ್ಯ ನಟ ರಾಜು ಶ್ರೀವಾಸ್ತವ್​ ಆರೋಗ್ಯದ ಕುರಿತು ಮಾಹಿತಿ ನೀಡಿದ ಮಗಳು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದೆಹಲಿ ಏಮ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಹಾಸ್ಯ ನಟ ರಾಜು ಶ್ರೀವಾಸ್ತವ್​ ಅವರ ಆರೋಗ್ಯದ ಬಗ್ಗೆ ಅನೇಕ ಗೊಂದಲಗಳು ಮೂಡಿದ್ದು, ಇದೀಗ ಖುದ್ದಾಗಿ ಅವರ ಮಗಳು ಮಾಹಿತಿ ಹಂಚಿಕೊಂಡಿದ್ದಾರೆ.
ರಾಜು ಅವರ ಪುತ್ರಿ ಅಂತರಾ ಶ್ರೀವಾಸ್ತವ್​, ತಂದೆಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ ಎಂದು ತಿಳಿಸಿದ್ದಾರೆ.
ಯಾವುದೇ ರೀತಿಯ ವದಂತಿ ಹಬ್ಬಿಸಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಜಿಮ್​ನಲ್ಲಿ ವರ್ಕೌಟ್ ಮಾಡ್ತಿದ್ದ ವೇಳೆ ಹೃದಯಘಾತಕ್ಕೊಳಗಾಗಿ ಕಳೆದ 15 ದಿನಗಳಿಂದ ರಾಜು ಶ್ರೀವಾಸ್ತವ್​​ ಏಮ್ಸ್​ನ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಅವರ ಬ್ರೇನ್​ ಸಂಪೂರ್ಣವಾಗಿ ಡೆಡ್​​ ಆಗಿದೆ ಎಂದು ಹೇಳಲಾಗಿತ್ತು. ಈಗಾಗಲೇ ಅವರಿಗೆ ಆಂಜಿಯೋಪ್ಲ್ಯಾಸ್ಟಿ ಮಾಡಲಾಗಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆಂದು ತಿಳಿಸಿದ್ದಾರೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!