ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಯಾಂಡಲ್ ವುಡ್ ಹಾಸ್ಯ ನಟ ಶಿವರಾಜ್ ಕೆ.ಆರ್ ಪೇಟೆ (Shivaraj K.R.Pete) ಅವರ ತಂದೆ ರಾಮೇಗೌಡ (80) (Ramegowda) ಅವರು ಇಂದು ಕೆ.ಆರ್ ಪೇಟೆ ಸ್ವಗೃಹದಲ್ಲಿ ದೈವಾಧೀನರಾಗಿದ್ದಾರೆ.
ಕೆ.ಆರ್.ಪೇಟೆ ತಾಲೂಕಿನ ಶೀಳನೆರೆ ಹೋಬಳಿಯ ರಾಜಘಟ್ಟ ಗ್ರಾಮದ ನಿವಾಸಿಯಾಗಿದ್ದ ಅವರು ಡ್ರಾಮಾ ಮಾಸ್ಟರ್ ಆಗಿಯೂ ಪ್ರಸಿದ್ಧಿಯಾಗಿದ್ದರು. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.
ಮೃತರು ಪತ್ನಿ ಸಾವಿತ್ರಮ್ಮ, ಚಿತ್ರನಟ ಕೆ.ಆರ್.ಪೇಟೆ ಶಿವರಾಜ್ (ಕಾಮಿಡಿ ಕಿಲಾಡಿಗಳು) ಸೇರಿದಂತೆ ನಾಲ್ಕು ಗಂಡು ಮಕ್ಕಳು ಮೂರು ಹೆಣ್ಣುಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.