ಪ್ರಧಾನಿ ಮೋದಿ ವಿರುದ್ಧ ಸ್ವತಂತ್ರವಾಗಿ ಸ್ಪರ್ಧಿಸಲಿದ್ದಾರೆ ಹಾಸ್ಯನಟ ಶ್ಯಾಮ್ ರಂಗೀಲಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವುದಾಗಿ ಹಾಸ್ಯನಟ ಶ್ಯಾಮ್ ರಂಗೀಲಾ ಘೋಷಣೆ ಮಾಡಿದ್ದಾರೆ. ಸ್ವತಂತ್ರ್ಯ ಅಭ್ಯರ್ತಿಯಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ.

ವಾರಣಾಸಿಯಿಂದ ಚುನಾವಣೆಗೆ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದೇನೆ. ನಿಮ್ಮಲ್ಲರಿಂದ ನನಗೆ ಸಿಗುತ್ತಿರುವ ಪ್ರೀತಿ, ಬೆಂಬಲದಿಂದ ನಾನು ಉತ್ಸುಕನಾಗಿದ್ದೇನೆ. ನಾಮಪತ್ರ ಸಲ್ಲಿಕೆ ಹಾಗೂ ಮುಂದಿನ ಮಾಹಿತಿಗಳ ಬಗ್ಗೆ ವೀಡಿಯೋ ಸಂದೇಶಗಳ ಮೂಲಕ ನಿಮಗೆ ತಿಳಿಸುತ್ತಿರುತ್ತೇನೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!