ಹರ್ಷ ಕುಟುಂಬಕ್ಕೆ ಸಾಂತ್ವನ ಹೇಳಿ ಧೈರ್ಯ ತುಂಬಿದ ಜನಪ್ರತಿನಿಧಿಗಳು, ಮುಖಂಡರು

ಹೊಸದಿಗಂತ ಆನ್‌ಲೈನ್ ಡೆಸ್ಕ್

ಶಿವಮೊಗ್ಗದ ಸೀಗೆಹಟ್ಟಿಯಲ್ಲಿರುವ ಹರ್ಷ ನಿವಾಸಕ್ಕೆ ಜನಪ್ರತಿನಿಧಿಗಳು, ರಾಜಕೀಯ, ಸಂಘಟನೆಗಳ ಮುಖಂಡರು ಬೇಟಿ ನೀಡಿ ಕುಂಬದ ಮಂದಿಗೆ ಧೈಯೇತುಂಬಿದ್ದಾರೆ.
ಸಚಿವ ಕೆ.ಎಸ್. ಈಶ್ವರಪ್ಪ, ಸಂಸದ ಬಿ. ವೈ. ರಾಘವೇಂದ್ರ, ಋಷಿಕುಮಾರ ಸ್ವಾಮೀಜಿ, ಆರೆಸ್ಸೆಸ್‌ನ ಪ್ರಮುಖರಾದ ಪಟ್ಟಾಭಿ, ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ವಾಸುದೇವ್, ಬಜರಂಗದಳ ಪ್ರಮುಖರು, ಹಿಂದೂ ಪರ ಸಂಘಟನೆ ಪ್ರಮುಖರು ಕುಂಟುಂದ ಮಂದಿಗೆ ಸಾಂತ್ನ ಹೇಳಿ ಧೈರ್ಯ ತುಂಬಿದ್ದಾರೆ.
ಎಲ್ಲೆಡೆ ವ್ಯಾಪಕ ಖಂಡನೆ
ಶಿವಮೊಗ್ಗದಲ್ಲಿ ನಡೆದ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಗೆ ವ್ಯಾಪಕ ಖಂಡನೆಗಳು ವ್ಯಕ್ತವಾಗಿದೆ.
ಹರ್ಷ ಕೊಲೆ ಕೃತ್ಯವನ್ನು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಖಂಡಿಸಿದೆ. ಈ ಬಗ್ಗೆ ಪ್ರತಿಕ್ರೀಯಿಸಿರುವ ಹೆಚ್.ಎಸ್. ಸುಂದರೇಶ್ ಅವರು ಈ ದುಷ್ಕೃತ್ಯ ಎಸಗಿದ ಆರೋಪಿಗಳನ್ನು ಆದಷ್ಟು ಬೇಗ ಪತ್ತೆ ಹಚ್ಚಬೇಕು ಎಂದು ಆಗ್ರಹಿಸಿದ್ದಾರೆ. ಜೊತೆಗೆ ಯಾವುದೇ ಪಕ್ಷ, ಧರ್ಮ, ಜಾತಿಯಾದರೂ ಸಹ ಯಾವುದೇ ಒತ್ತಡಕ್ಕೆ ಮಣಿಯದೇ ಕಠಿಣ ಕ್ರಮ ಜರುಗಿಸಿ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಘಟನೆಯನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಶಿವಮೊಗ್ಗ ಜಿಲ್ಲಾ ಸಮಿತಿ ಕೂಡಾ ಖಂಡಿಸಿದ್ದು,  ಶಿವಮೊಗ್ಗ ನಗರದ ಜನತೆ ಶಾಂತಿ ಕಾಪಾಡುವಂತೆ ಮನವಿ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!