ಮಂಗಳೂರಿಗೆ ಬರುತ್ತಿರುವೆ: ಕನ್ನಡದಲ್ಲೇ ಟ್ವೀಟ್ ಮಾಡಿ ಜನತೆಯ ಖುಷಿಯನ್ನು ಇಮ್ಮಡಿಗೊಳಿಸಿದ `ಚೌಕೀದಾರ್’

ಹೊಸದಿಗಂತ ವರದಿ, ಮಂಗಳೂರು:

ಮಂಗಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಶುಕ್ರವಾರ ನಡೆಯಲಿರುವ ಸಮಾವೇಶವನ್ನು ಎದುರು ನೋಡುತ್ತಿರುವುದಾಗಿ ಟ್ವೀಟ್ ಮೂಲಕ ಪ್ರಧಾನಿ ನರೇಂದ್ರ ಮೋದಿ ತಮ್ಮ ಕಾತರತೆ ವ್ಯಕ್ತಪಡಿಸಿದ್ದಾರೆ. ಇದು ಮಂಗಳೂರಿನ ಜನತೆಯ ಖುಷಿಯನ್ನು ಇಮ್ಮಡಿಗೊಳಿಸಿದೆ.
`ನಾಳೆ ಸೆಪ್ಟೆಂಬರ್ 2 ರಂದು ಮಂಗಳೂರಿನ ಸೋದರಿಯರು ಮತ್ತು ಸೋದರರೊಂದಿಗೆ ಇರುವ ಸಂದರ್ಭವನ್ನು ಎದುರು ನೋಡುತ್ತಿರುವೆ’ ಎಂದವರು ಟ್ವಿಟರ್ ಮೂಲಕ ಹೇಳಿಕೊಂಡಿದ್ದಾರೆ.

3,800 ಕೋಟಿ ರೂ.ಮೌಲ್ಯದ ಪ್ರಮುಖ ಯೋಜನೆಗಳ ಉದ್ಘಾಟನೆ ಮತ್ತು ಕೆಲವು ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಲಾಗುವುದು. ಈ ಮುಖ್ಯವಾದ ಯೋಜನೆಗಳು ಯಾಂತ್ರೀಕರಣ ಮತ್ತು ಕೈಗಾರಿಕೀಕರಣಕ್ಕೆ ಸಂಬಂಧಿಸಿದ್ದಾಗಿವೆ ಎಂದವರು ಕನ್ನಡದಲ್ಲಿ ಬರೆಯುವ ಮೂಲಕ ಕರ್ನಾಟಕದ ಜನತೆಯ ಮನಗೆದ್ದಿದ್ದಾರೆ. ಪ್ರಧಾನಿಯವರ ಟ್ವೀಟ್‌ಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!