Thursday, July 7, 2022

Latest Posts

ಊರಿಗೆ ಬರುತ್ತಿದ್ದ ಯೋಧ ಅಪಘಾತದಲ್ಲಿ ಸಾವು: ಪತ್ನಿ ಆತ್ಮಹತ್ಯೆಗೆ ಯತ್ನ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ರಜೆಯ ಮೇಲೆ ಮನೆಗೆ ಸ್ವಗ್ರಾಮಕ್ಕೆ ಬರುತ್ತಿದ್ದ ಯೋಧ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಈ ವಿಷಯ ತಿಳಿದು ಆಘಾತಕ್ಕೊಳಗಾದ ಆತನ ಗರ್ಭಿಣಿ ಪತ್ನಿ ಆತ್ಮಹತ್ಯೆಗೆ ಯತ್ನಿಸಿರುವ ಹೃದಯವಿದ್ರಾವಕ ಘಟನೆ ಆಂಧ್ರಪ್ರದೇಶದ ನಂದಾವರಂ ವಲಯದ ಕನಕವೀಡು ಪೇಟದಲ್ಲಿ ನಡೆದಿದೆ.
ಕರ್ನೂಲ್ ಜಿಲ್ಲೆಯ ಕನಕವೀಡು ಪೇಟದ ಕುರುವ ನಾಗಪ್ಪ ಮತ್ತು ಭೀಮಕ್ಕ ಎಂಬುವರ ಮಗ ಮನೋಹರ್​(29) ಮೃತ ಯೋಧ. ಇವರು ಹಿಮಾಚಲ ಪ್ರದೇಶದಲ್ಲಿ ಸೇವೆ ಸಲ್ಲಿಸುತ್ತಿದ್ದು, ರಜೆ ಮೇಲೆ ಸ್ವಗ್ರಾಮಕ್ಕೆ ಬರುತ್ತಿದ್ದರು. ಅಕ್ಟೋಬರ್ 7 ರಂದು ಅವರು ಮಧ್ಯಪ್ರದೇಶದಲ್ಲಿ ರೈಲಿನಿಂದ ಇಳಿದು, ಮತ್ತೊಂದು ರೈಲಿಗೆ ಹತ್ತುವಾಗ ಕಾಲು ಜಾರಿ ಕೆಳಕ್ಕೆ ಬಿದ್ದು ಮೃತಪಟ್ಟಿದ್ದಾರೆ. ಮನೋಹರ್​, ಮೂರು ವರ್ಷಗಳ ಹಿಂದೆ ರಮಾದೇವಿ ಎಂಬವರನ್ನು ಮದುವೆಯಾಗಿದ್ದು, ಆಕೆ ಗರ್ಭಿಣಿಯಾಗಿದ್ದಾಳೆ. ಪತಿಯ ಸಾವಿನ ಸುದ್ದಿ ಕೇಳಿ ಮನನೊಂದ ರಮಾದೇವಿ, ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಕೂಡಲೇ ಕುಟುಂಬಸ್ಥರು ಆಕೆಯನ್ನು ಕರ್ನೂಲ್ ಸರ್ಕಾರಿ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಿದ್ದಾರೆ. ರಮಾದೇವಿ ಪ್ರಾಣಾಪಾಯದಿಂದ ಪಾರಾಗಿದ್ದು, ಯಾವುದೇ ತೊಂದರೆಯಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss