spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, December 4, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

1 ರಿಂದ 5ನೇ ತರಗತಿ ಶಾಲೆಗಳ ಆರಂಭ: ಇನ್ನೆರೆಡು ದಿನಗಳಲ್ಲಿ ನಿರ್ಧಾರ ಎಂದ ಸಿಎಂ ಬೊಮ್ಮಾಯಿ

- Advertisement -Nitte

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಒಂದರಿಂದ ಐದನೇ ತರಗತಿ ಶಾಲೆಗಳ ಆರಂಭ ಕುರಿತು ಇನ್ನೆರೆಡು ದಿನಗಳಲ್ಲಿ ತಜ್ಞರ ಸಭೆ ಕರೆದು ಸಮಾಲೋಚಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.ತಜ್ಞರು ನೀಡುವ ಸಲಹೆ ಆಧರಿಸಿ ಸರ್ವ ಸಮ್ಮತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
ಇದೇ ವೇಳೆ ಗಡಿ ಜಿಲ್ಲೆಗಳಲ್ಲಿ ಸಂಚಾರ ಪುನರಾರಂಭಿಸುವ ಕುರಿತು ತೀರ್ಮಾನ ಮಾಡಲಾಗುವುದು ಎಂದರು.
ಹಾನಗಲ್ ಮತ್ತು ಸಿಂದಗಿ ಎರಡೂ ಉಪಚುನಾವಣೆಗಳ ಪ್ರಚಾರ ಕಣಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಭಾಗವಹಿಸಲಿದ್ದಾರೆ. ಈಗಾಗಲೇ ಅವರನ್ನು ಭೇಟಿ ಮಾಡಿ ವಿನಂತಿ ಮಾಡಿದ್ದು, ಎರಡೂ ಕ್ಷೇತ್ರಗಳಲ್ಲಿ ತಲಾ ಎರಡು ದಿನ ಪ್ರಚಾರ ಕೈಗೊಳ್ಳುವ ಜತೆಗೆ ರೋಡ್ ಷೋ ನಡೆಸಲಿದ್ದಾರೆ. ಎರಡೂ ಕ್ಷೇತ್ರದಲ್ಲೂ ಪಕ್ಷ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss