ಹೊಸದಿಗಂತ ಡಿಜಿಟಲ್ ಡೆಸ್ಕ್ :
ಕಾವೇರಿ ವಿವಾದಕ್ಕೆ ಸಂಬಂಧಿಸಿ ಮಧ್ಯಾಹ್ನ ಸುಪ್ರೀಂ ಕೋರ್ಟ್ ತೀರ್ಪು ನೀಡಲಿದೆ ಬಳಿಕ ಇದರ ಬಗ್ಗೆ ಪ್ರತಿಕ್ರಿಯೆ ನೀಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ವಿಚಾರವಾಗಿ ರಾಜ್ಯದ ಹಿತಾಸಕ್ತಿಗೆ ಧಕ್ಕೆ ಬರದಂತೆ ನೋಡಿಕೊಳ್ಳುತ್ತೇವೆ ಎಂದಿದ್ದಾರೆ.
ರಾಜ್ಯದ 1.10 ಕೋಟಿ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆ ತಲುಪಲಿದೆ, 1.41ಲಕ್ಷ ಮನೆಗಳಿಗೆ ಗೃಹಜ್ಯೋತಿ ಯೋಜನೆ ತಲುಪಿದೆ, ಶೂನ್ಯ ವಿದ್ಯುತ್ ಬಿಲ್ ಬಂದಿದೆ, 46 ಕೋಟಿ ಹೆಣ್ಣು ಮಕ್ಕಳು ಬಸ್‌ನಲ್ಲಿ ಪ್ರಯಾಣ ಮಾಡಿದ್ದಾರೆ. 1.39 ಕೋಟಿ ಕುಟುಂಬಗಳಿಗೆ ಅನ್ನಭಾಗ್ಯದ ಪ್ರಯೋಜನ ತಲುಪಿದೆ ನಮ್ಮ ಸರ್ಕಾರ ನೂರು ದಿನದಲ್ಲಿ ಸಾಕಷ್ಟು ಸಾಧನೆಗಳನ್ನು ಮಾಡಿದೆ ಎಂದು ಅವರು ಹೇಳಿದರು.