ಹೊಸದಿಗಂತ ಡಿಜಿಟಲ್ ಡೆಸ್ಕ್:
ತಿರುಪತಿ ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬಗಳ ಬಳಕೆ ದೇಶದಲ್ಲೇ ಸಂಚಲನ ಸೃಷ್ಟಿಸಿದ್ದು , ತಿಮ್ಮಪ್ಪನ ಪ್ರಸಾದ ಲಡ್ಡುವಿಗೆ ಬಳಸೋ ತುಪ್ಪದಲ್ಲಿ ಮೀನಿನ ಎಣ್ಣೆ, ಬೀಫ್ ಟ್ಯಾಲೋ ಮತ್ತು ಹಂದಿ ಕೊಬ್ಬು ಇತ್ತು ಎಂದು ಲ್ಯಾಬ್ ರಿಪೋರ್ಟ್ ಧೃಡಪಡಿಸಿತ್ತು. ಈ ಬೆನ್ನಲ್ಲೇ ಎಚ್ಚೆತ್ತ ಆಂಧ್ರದ ಡಿಸಿಎಂ ಪವನ್ ಕಲ್ಯಾಣ್ ಅವರು ತಿರುಪತಿ ತಿಮ್ಮಪ್ಪನ ಕ್ಷಮೆ ಕೋರಿದ್ದಾರೆ. ಅಷ್ಟೇ ಅಲ್ಲದೇ ಇಂದಿನಿಂದ 11 ದಿನಗಳ ಕಾಲ ಪ್ರಾಯಶ್ಚಿತ ದೀಕ್ಷೆ ಕೈಗೊಂಡಿದ್ದಾರೆ.
ಇದರ ಮಧ್ಯೆ ತಮಿಳು ನಟ ಕಾರ್ತಿಯವರು ಈ ಬಗ್ಗೆ ಮಾತಾಡಿದ್ದು, ಭಾರೀ ಸದ್ದು ಮಾಡುತ್ತಿದೆ.
ತಮಿಳು ನಟ ಕಾರ್ತಿ ನಟಿಸಿರುವ ತಮಿಳು ಸಿನಿಮಾ ‘ಮೆಯಿಳಾಗನ್’ ರಿಲೀಸ್ಗೆ ರೆಡಿ ಆಗಿದೆ. ಸಿನಿಮಾ ತಮಿಳಿನ ಜೊತೆಗೆ ತೆಲುಗಿನಲ್ಲೂ ಬಿಡುಗಡೆ ಆಗುತ್ತಿದೆ. ಮೆಯಿಳಾಗನ್ ಸಿನಿಮಾ ಪ್ರಚಾರಕ್ಕಾಗಿ ಇತ್ತೀಚೆಗೆ ಕಾರ್ತಿ ಹೈದರಾಬಾದ್ಗೆ ಬಂದಿದ್ದರು. ಈ ವೇಳೆ ನಿರೂಪಕಿ ‘ಲಡ್ಡು ಬೇಕಾ’ ಅನ್ನೋ ಡೈಲಾಗ್ ಹೇಳಿ ತಮಾಷೆ ಮಾಡಿದ್ರು. ಅದಕ್ಕೆ ಕಾರ್ತಿ, ‘ಲಡ್ಡು ವಿಷಯ ಈಗ ಬೇಡ, ಅದು ಬಹಳ ಸೆನ್ಸಿಟಿವ್ (ಸೂಕ್ಷ್ಮ) ವಿಷಯ ಆಗಿದೆ ಎಂದಿದ್ದರು. ಇದಕ್ಕೆ ಡಿಸಿಎಂ ಪವನ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಪವನ್ ಕಲ್ಯಾಣ್ ವಾರ್ನಿಂಗ್
ಈ ಬಗ್ಗೆ ಮಾತನಾಡಿದ್ದ ನಟ ಪವನ್ ಕಲ್ಯಾಣ್, ಇತ್ತೀಚೆಗೆ ಸಿನಿಮಾ ಕಾರ್ಯಕ್ರಮವೊಂದರಲ್ಲಿ ಯಾರೋ ‘ಲಡ್ಡು ಸೆನ್ಸಿಟಿವ್ ಇಶ್ಯೂ’ ಎಂದಿದ್ದಾರೆ. ಹಾಗೆ ಮಾತನಾಡಬೇಡಿ. ನಿಮ್ಮ ಮೇಲೆ ನನಗೆ ಗೌರವ ಇದೆ. ಆದರೆ, ಸನಾತನ ಧರ್ಮದ ವಿಷಯ ಬಂದಾಗ ನೀವು ಸಾವಿರ ಬಾರಿ ಯೋಚನೆ ಮಾಡಿ ಮಾತನಾಡಿ ಎಂದು ವಾರ್ನಿಂಗ್ ಕೊಟ್ಟಿದ್ದಾರೆ.