ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 198ರೂ. ಇಳಿಕೆ: ಬಳಕೆದಾರರು ಖುಷ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರತಿದಿನ ಗೃಹಬಳಕೆ ವಸ್ತುಗಳು, ದಿನಸಿ ಸೇರಿದಂತೆ ಎಲ್ಲದರ ದರ ಏರಿಕೆ ನಡುವೆ ಜುಲೈ 1 ರಂದೇ ಸಿಲಿಂಡರ್‌ ದರ ಇಳಿಕೆ ಮಾಡುವ ಮೂಲಕ ಗ್ರಾಹಕರಿಗೆ ತುಸು ನೆಮ್ಮದಿ ಬಂದಂತಾಗಿದೆ.

ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 198 ರೂ. ಇಳಿಕೆ ಮಾಡುವ ಮೂಲಕ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ. ಈ ಹಿಂದೆ 2,219 ರೂ. ಗಳಿದ್ದ 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 2021 ರೂಪಾಯಿಗೆ ಇಳಿಕೆಯಾದಂತಾಗಿದೆ.

ಕೋಲ್ಕತ್ತಾದಲ್ಲಿ 182 ರೂ., ಮುಂಬೈನಲ್ಲಿ 190,50 ರೂ., ಚೆನ್ನೈನಲ್ಲಿ 187 ರೂಪಾಯಿ ಇಳಿಕೆಯಾಗಿದೆ. ಆದರೆ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಇಳಿಕೆಯಾಗಿಲ್ಲ. ಗೃಹಬಳಕೆಯ ಸಿಲಿಂಡರ್‌ಗಳ ಬೆಲೆಯನ್ನು ಮೇ 19 ರಂದು ಕೊನೆಯದಾಗಿ ಬದಲಾಯಿಸಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!