October 15, 2026
Thursday, October 15, 2026
spot_img

ವಾಣಿಜ್ಯ ಸಿಲಿಂಡರ್‌ ಬೆಲೆ 200 ರೂ.ಗಳಷ್ಟು ಇಳಿಕೆ: ಎಷ್ಟಿದೆ ಇವತ್ತಿನ ರೇಟ್‌?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಹುದಿನಗಳ ಬಳಿಕ ವಾಣಿಜ್ಯ ಸಿಲಿಂಡರ್‌ ಬಳಕೆದಾರರಿಗೆ ಗುಡ್‌ನ್ಯೂಸ್‌ ಸಿಕ್ಕಿದ್ದು, ಕೆಲವು ಮಹಾನಗರಿಗಳಲ್ಲಿ ವಾಣಿಜ್ಯ ಸಿಲಿಂಡರ್‌ ಬೆಲೆ 200 ರೂ.ಗಳಷ್ಟು ಇಳಿಕೆಯಾಗಿದೆ.

ಬೆಂಗಳೂರು, ದೆಹಲಿ, ಕೊಲ್ಕತ್ತಾದಲ್ಲಿ ದರ ಇಳಿಕೆಯಾಗಿದೆ. ಇಂದು ಕೋಲ್ಕತ್ತಾದಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್‌ ಬೆಲೆ 209, ದೆಹಲಿಯಲ್ಲಿ 202 ರೂ.ಗಳಷ್ಟು ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 200 ರೂ. ಇಳಿಕೆಯಾಗಿದ್ದು, ಪರಿಷ್ಕೃತ ದರ ಇಂದಿನಿಂದಲೇ ಜಾರಿಯಾಗಲಿದೆ.

ಕೋಲ್ಕತ್ತಾದಲ್ಲಿ ಪ್ರತಿ 19 ಕೆಜಿ ವಾಣಿಜ್ಯ ಸಿಲಿಂಡರ್‌ ಬೆಲೆ 209 ರೂ. ಇಳಿಕೆಯಾಗಿದ್ದು ಪ್ರತಿ ಸಿಲಿಂಡರ್‌ ಬೆಲೆ 2,872.50 ರೂ.ಗೆ ಇಳಿಕೆಯಾಗಿದೆ. ದೆಹಲಿಯಲ್ಲಿ ಪ್ರತಿ ಸಿಲಿಂಡರ್‌ ಮೇಲಿನ ಬೆಲೆ 202 ರೂ. ಇಳಿಕೆಯಾಗಿದ್ದು, 2,728 ರೂ.ಗೆ ಇಳಿದಿದೆ. ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಚಿಲ್ಲರೆ ಬೆಲೆ (ರೀಟೇಲ್‌ ದರ) 2,930ರೂ. ರಷ್ಟಿದ್ದು, ಹೊಸ ದರಗಳು ಜುಲೈ 1 ರಿಂದ ಜಾರಿಗೆ ಬಂದಿವೆ.

Must Read