ಜನರಿಗೆ ಮತ್ತಷ್ಟು ಹೊರೆ:ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಈಗಾಗಲೇ ದುಬಾರಿ ಬೆಲೆಯಿಂದ ಕಂಗೆಟ್ಟಿರುವ ಜನರ ಮೇಲೆ ಹೊಸ ವರ್ಷದಂದು ಕೇಂದ್ರ ಸರ್ಕಾರ ಮತ್ತೊಂದು ಹೊರೆ ಹೊರಿಸಿದೆ. ವಾಣಿಜ್ಯ ಉದ್ದೇಶಕ್ಕೆ ಬಳಸುವ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಏರಿಕೆಯಾಗಿದೆ. ಗ್ಯಾಸ್ ಸಿಲಿಂಡರ್‌ಗೆ 25 ರೂ. ಹೆಚ್ಚಿದ ಬೆಲೆಗಳು ತಕ್ಷಣವೇ ಜಾರಿಗೆ ಬರಲಿವೆ ಎಂದು ದೇಶೀಯ ತೈಲ ಮಾರುಕಟ್ಟೆ ಸಂಸ್ಥೆಗಳು ಘೋಷಿಸಿವೆ.

ಹೆಚ್ಚಿದ ಬೆಲೆಗಳ ಪ್ರಕಾರ ದೆಹಲಿಯಲ್ಲಿ 19 ಕೆಜಿಯ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ರೂ.1768 ಹೆಚ್ಚಾಗಿದೆ. ಮುಂಬೈನಲ್ಲಿ 1721 ರೂ.ಗೆ ತಲುಪಿದೆ. ಕೋಲ್ಕತ್ತಾದಲ್ಲಿ ರೂ.1870 ಮತ್ತು ಚೆನ್ನೈನಲ್ಲಿ ರೂ.1917 ಏರಿಕೆಯಾಗಿದೆ.

ಗೃಹಬಳಕೆಗೆ ಬಳಸುವ 14 ಕೆಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ ಎಂಬುದು ಗಮನಾರ್ಹ. ಪ್ರಸ್ತುತ ಗೃಹಬಳಕೆ ಗ್ಯಾಸ್ ಸಿಲಿಂಡರ್ ಬೆಲೆ 1105 ಆಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!