Friday, June 9, 2023

Latest Posts

ಏಪ್ರಿಲ್‌ ಮೊದಲ ದಿನವೇ ಗುಡ್‌ನ್ಯೂಸ್‌: ಇಳಿಕೆ ಕಂಡ ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್ ಬೆಲೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ಏಪ್ರಿಲ್‌ ಮೊದಲ ದಿನದಂದೇ ಗ್ರಾಹಕರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ನ ಬೆಲೆ ಅಲ್ಪ ಪ್ರಮಾಣದಲ್ಲಿ ಇಳಿಕೆಯಾಗಿದೆ. ಪೆಟ್ರೋಲಿಯಂ ಕಂಪನಿಗಳು ಸಾಮಾನ್ಯವಾಗಿ ಹೊಸ ಹಣಕಾಸು ವರ್ಷದ ಮೊದಲ ದಿನವಾದ ಏಪ್ರಿಲ್ 1 ರಂದು ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಪರಿಷ್ಕರಿಸುತ್ತವೆ. ಈ ಕ್ರಮದಲ್ಲಿ ಇಂದಿನಿಂದ 2023-24ನೇ ಹಣಕಾಸು ವರ್ಷ ಆರಂಭವಾಗಲಿದೆ. 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ರೂ. 92 ಕಡಿಮೆಯಾಗಿದ್ದು, ಗೃಹಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಕಳೆದ ತಿಂಗಳು ಕೇಂದ್ರ ಸರ್ಕಾರ 14.2 ಕೆಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು ರೂ. 50, ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ರೂ. 350 ಹೆಚ್ಚಳ ಮಾಡಿತ್ತು. ಆದರೆ, ಇಂದಿನಿಂದ ವಾಣಿಜ್ಯ ಸಿಲಿಂಡರ್ ಬೆಲೆ ರೂ. 92 ಕಡಿಮೆಯಾಗಲಿದೆ. ಇಳಿಕೆಯಾದ ಬೆಲೆಗಳು ಇಂದಿನಿಂದ ಜಾರಿಗೆ ಬರಲಿವೆ.

ಅದರಂತೆ ದೆಹಲಿಯಲ್ಲಿ ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ಗೆ ರೂ. 2,028 ಲಭ್ಯವಿದೆ. ದೆಹಲಿ – 2,028, ಕೋಲ್ಕತ್ತಾ-2,132, ಮುಂಬೈ ರೂ. 1,980, ಚೆನ್ನೈ ರೂ. 2,192.50, ಹೈದರಾಬಾದ್- 2,325ರೂಪಾಯಿ ಇದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!