ಹೊಸದಿಗಂತ ಡಿಜಿಟಲ್ ಡೆಸ್ಕ್:
ಬುಧವಾರ ಬೆಳ್ಳಂಬೆಳಗ್ಗೆ ಗ್ರಾಹಕರ ಜೇಬಿಗೆ ಕತ್ತರಿ ಬೀಳುವ ಸುದ್ದಿ ಹೊರಬಿದ್ದಿದೆ. ದೇಶದಲ್ಲಿ 19 ಕೆಜಿಯ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ಮತ್ತೆ ಏರಿಕೆಯಾಗಿದೆ ಕಂಡಿದ್ದು, ಪ್ರತಿ ಸಿಲಿಂಡರ್‌ನ ಬೆಲೆ 100 ರೂ ಹೆಚ್ಚಳವಾಗಿದೆ. ಕಳೆದ ಎರಡು ತಿಂಗಳಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಏರಿಕೆಯಾಗುತ್ತಿರುವುದು ಇದು ಎರಡನೇ ಬಾರಿ.
ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು ಬುಧವಾರ ದೇಶದ ವಿವಿಧ ಭಾಗಗಳಲ್ಲಿ ವಾಣಿಜ್ಯ ಎಲ್‌ಪಿಜಿ (ದ್ರವೀಕೃತ ಪೆಟ್ರೋಲಿಯಂ ಅನಿಲ) ಸಿಲಿಂಡರ್‌ಗಳ ಬೆಲೆಯನ್ನು 100ರೂಪಾಯಿಗೆ ಏರಿಸಿದೆ.
ಪ್ರಮುಖ ನಗರಗಳಲ್ಲಿ ಎಲ್‌ಪಿಜಿ ಸಿಲಿಂಡರ್ ಬೆಲೆ ಹೀಗಿದೆ
19 ಕೆಜಿಯ ವಾಣಿಜ್ಯ LPG ಸಿಲಿಂಡರ್ ಈಗ ದೆಹಲಿಯಲ್ಲಿ 1,731 ರೂ ಬದಲಿಗೆ 1,833 ರೂ. ಆಗಿದೆ.
- ಮುಂಬೈನಲ್ಲಿ ರೂ.1,785.50,
- ಕೋಲ್ಕತ್ತಾ ರೂ.1,943
- ಚೆನ್ನೈನಲ್ಲಿ ರೂ.1,999.50
- ಬೆಂಗಳೂರು 1,914.50ರೂಗೆ ಏರಿಕೆ ಕಂಡಿದೆ.
ಮನೆಯ ಅಡುಗೆ ಉದ್ದೇಶಕ್ಕೆ ಬಳಸುವ ಸಿಲಿಂಡರ್ ಬೆಲೆ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ದೇಶದ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರವು ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸಿಲ್ಲ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಮಾತ್ರ ಏರಿಕೆಯಾಗಿದೆ.