ಗ್ರಾಹಕರಿಗೆ ಖುಷಿ ಸುದ್ದಿ: ವಾಣಿಜ್ಯ ಸಿಲಿಂಡರ್‌ ದರ 171.5 ರೂಪಾಯಿ ಇಳಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪೆಟ್ರೋಲಿಯಂ ಮತ್ತು ತೈಲ ಮಾರುಕಟ್ಟೆ ಕಂಪನಿಗಳು ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 171.50 ರೂ.ಗಳಷ್ಟು ಕಡಿತಗೊಳಿಸಿವೆ. ಹೀಗಾಗಿ ದೆಹಲಿಯಲ್ಲಿ 19 ಕೆಜಿ ಎಲ್‌ಪಿಜಿ ಸಿಲಿಂಡರ್‌ನ ಬೆಲೆ  1,856.50ರೂಪಾಯಿ ಆಗಿದೆ.

ಕಳೆದ ತಿಂಗಳು ಕೂಡ ಅವುಗಳ ಬೆಲೆ ಪ್ರತಿ ಯೂನಿಟ್‌ಗೆ 91.50 ರೂಪಾಯಿ ಇಳಿಕೆಯಾಗಿದ್ದು, ಪ್ರತಿ ಯೂನಿಟ್‌ಗೆ 2028 ರೂಪಾಯಿ ಇತ್ತು. ಇದೀಗ ಮತ್ತಷ್ಟು ಕಡಿಮೆಯಾಗಿದೆ. ಗೃಹ ಬಳಕೆ ಸಿಲಿಂಡರ್‌ ದರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ.

ಪೆಟ್ರೋಲಿಯಂ ಮತ್ತು ತೈಲ ಮಾರುಕಟ್ಟೆ ಕಂಪನಿಗಳು ಈ ವರ್ಷ ಮಾರ್ಚ್ 1 ರಂದು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಪ್ರತಿ ಯೂನಿಟ್‌ಗೆ 350.50 ರೂ ಮತ್ತು ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಪ್ರತಿ ಯೂನಿಟ್‌ಗೆ 50 ರೂ.
ಕಳೆದ ವರ್ಷ ಸೆಪ್ಟೆಂಬರ್ 1 ರಂದು ವಾಣಿಜ್ಯ ಸಿಲಿಂಡರ್‌ಗಳ ಬೆಲೆಯನ್ನು 91.50 ರೂ.ಗಳಷ್ಟು ಕಡಿಮೆಗೊಳಿಸಲಾಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!