ಹೊಸದಿಗಂತ ಡಿಜಿಟಲ್ ಡೆಸ್ಕ್:
ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆ ಪರಿಷ್ಕರಣೆ ಮಾಡಲಾಗಿದ್ದು, ದರದಲ್ಲಿ 19 ರೂ. ಇಳಿಕೆ ಮಾಡಲಾಗಿದೆ. ಇದರಿಂದಾಗಿ ವಾಣಿಜ್ಯ ಸಿಲಿಂಡರ್ ಬಳಕೆದಾರರ ಮೊಗದಲ್ಲಿ ಸಂತಸ ಮೂಡಿದೆ.
ಮೆಟ್ರೋ ನಗರಗಳಾದ ನವದೆಹಲಿ, ಮುಂಬೈ, ಕೋಲ್ಕತ್ತಾ ಮತ್ತು ಚೆನ್ನೈ ಸೇರಿದಂತೆ ದೇಶದಾದ್ಯಂತ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ತೈಲ ಮಾರುಕಟ್ಟೆ ಕಂಪನಿಗಳು ಬುಧವಾರ ಕಡಿತಗೊಳಿಸಿವೆ. ಪರಿಷ್ಕೃತ ದರಗಳು ತಕ್ಷಣದಿಂದಲೇ ಜಾರಿಗೆ ಬರಲಿದೆ.
ವಾಣಿಜ್ಯ ಸಿಲಿಂಡರ್ ಬೆಲೆಯನ್ನು 19 ರೂಪಾಯಿ ಕಡಿತಗೊಳಿಸಿದ ನಂತರ ದೆಹಲಿಯಲ್ಲಿ 1745.50 ರೂ. ಈ ಹಿಂದೆ ದೆಹಲಿಯಲ್ಲಿ 19 ಕೆಜಿ ಸಿಲಿಂಡರ್ ಬೆಲೆ 1764.50 ರೂ. ಕಡಿತದ ನಂತರ, ಕೋಲ್ಕತ್ತಾದಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 1859 ರೂ. 19 ಕೆಜಿ ತೂಕದ ಸಿಲಿಂಡರ್ ಮುಂಬೈನಲ್ಲಿ 1698.50 ರೂ.ಗೆ ಮತ್ತು ಚೆನ್ನೈನಲ್ಲಿ 1911 ರೂ.ಗೆ ಲಭ್ಯವಾಗಲಿದೆ.