ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಗೆ ಆಯೋಗ ಬದ್ಧ : ಅಧ್ಯಕ್ಷ ಯು.ನಿಸಾರ್ ಅಹ್ಮದ್

ಹೊಸದಿಗಂತ ವರದಿ ಚಿತ್ರದುರ್ಗ: ಸಂವಿಧಾನಬದ್ಧವಾಗಿ ದೇಶದ ಅಲ್ಪಸಂಖ್ಯಾತರಿಗೆ ದೊರೆತಿರುವ ಕಾನೂನಾತ್ಮಕ ಹಕ್ಕುಗಳು ಮತ್ತು ಸವಲತ್ತುಗಳನ್ನು ಸಮರ್ಪಕವಾಗಿ ತಲುಪಿಸಲು ಹಾಗೂ ಅವರ ಹಿತರಕ್ಷಣೆ ಮಾಡಲು ರಾಜ್ಯ ಅಲ್ಪಸಂಖ್ಯಾತರ ಆಯೋಗವು ಸಂಪೂರ್ಣ ಬದ್ಧವಾಗಿದೆ ಎಂದು ಆಯೋಗದ ಅಧ್ಯಕ್ಷ ಯು. ನಿಸಾರ್ ಅಹ್ಮದ್ ತಿಳಿಸಿದರು. ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು ಅವರು, ಆಯೋಗಕ್ಕೆ ಸಿವಿಲ್ ನ್ಯಾಯಾಲಯದ ಮಾದರಿಯ ವಿಶೇಷ ಅಧಿಕಾರಗಳಿದ್ದು, ಅಲ್ಪಸಂಖ್ಯಾತ ಸಮುದಾಯದ … Continue reading ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಗೆ ಆಯೋಗ ಬದ್ಧ : ಅಧ್ಯಕ್ಷ ಯು.ನಿಸಾರ್ ಅಹ್ಮದ್