ಒಡಿಶಾ ರೈಲು ದುರಂತ| ಕನ್ನಡಿಗರ ರಕ್ಷಣೆಗೆ ಸಂತೋಷ್ ಲಾಡ್ ನೇತೃತ್ವದಲ್ಲಿ ತಂಡ, ಸಹಾಯವಾಣಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಒಡಿಶಾದ ಬಾಲಸೋರ್‌ನಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದ್ದು, ಘಟನಾ ಸ್ಥಳಕ್ಕೆ ತೆರಳಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನಹರಿಸಲು ಸಂತೋಷ್ ಲಾಡ್ ಅವರಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಈ ಬಗ್ಗೆ ಸಿಎಂ ಟ್ವೀಟ್ ಮಾಡಿದ್ದು, ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತದ ಹಿನ್ನೆಲೆಯಲ್ಲಿ ತಕ್ಷಣ ಘಟನಾ ಸ್ಥಳಕ್ಕೆ ತೆರಳಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸುವಂತೆ ಹಾಗೂ ಅವರಿಗೆ ಅಗತ್ಯ ನೆರವನ್ನು ನೀಡುವಂತೆ ಸಚಿವ ಸಂತೋಷ್ ಲಾಡ್ ಅವರಿಗೆ ಸೂಚಿಸಿದ್ದೇನೆ. ಘಟನೆಯಲ್ಲಿ ಗಾಯಗೊಂಡ ಅಥವಾ ಇತರೆ ಯಾವುದೇ ಸಮಸ್ಯೆ ಎದುರಿಸುತ್ತಿರುವ ಕನ್ನಡಿಗರ ರಕ್ಷಣೆಗೆ ನಾವು ಬದ್ಧರಿದ್ದೇವೆ. ಪ್ರತಿಯೊಬ್ಬ ಕನ್ನಡಿಗನನ್ನು ನಾವು ಸುರಕ್ಷಿತವಾಗಿ ನಾಡಿಗೆ ಕರೆ ತರುತ್ತೇವೆ ಎಂದಿದ್ದಾರೆ.

ಜತೆಯಲ್ಲೇ, ಟ್ವೀಟ್ ಮೂಲಕ ಕರ್ನಾಟಕದವರು ಸಂಪರ್ಕಿಸಬಹುದಾದ ಸಹಾಯವಾಣಿ ವಿವರಗಳನ್ನೂ ಮುಖ್ಯಮಂತ್ರಿ ಹಂಚಿಕೊಂಡಿದ್ದಾರೆ.
“..ಕನ್ನಡಿಗರಿಗೆ ಅಗತ್ಯ ನೆರವು ನೀಡಲು ಹಾಗೂ ಸುರಕ್ಷತೆಯ ಮಾಹಿತಿ ಒದಗಿಸಲು ರಾಜ್ಯ ತುರ್ತು ನಿರ್ವಹಣಾ ಕೇಂದ್ರ (SEOC)ದಲ್ಲಿ ನಾಗರೀಕರ ಅನುಕೂಲಕ್ಕಾಗಿ ಸಹಾಯವಾಣಿ ತೆರೆಯಲಾಗಿದೆ. ದೂರವಾಣಿ ಸಂಖ್ಯೆ: 1070, 080-22253707, 080-22340676 ಕ್ಕೆ ಕರೆಮಾಡಿ ಮಾಹಿತಿ ಅಥವಾ ನೆರವು ಪಡೆಯಿರಿ.” ಎಂದವರು ಟ್ವೀಟ್ ಮಾಡಿದ್ದಾರೆ.

ಕನ್ನಡಿಗರ ಸುರಕ್ಷತೆಗಾಗಿ ಸಹಾಯವಾಣಿಗಳು ಆರಂಭವಾಗಿದ್ದು, ಎಲ್ಲ ಕನ್ನಡಿಗರು ಸುರಕ್ಷಿತವಾಗಿ ರಾಜ್ಯಕ್ಕೆ ಬರಲಿದ್ದಾರೆ ಎಂದು ಹೇಳಿದ್ದಾರೆ.ಭೀಕರ ರೈಲು ಅಪಘಾತದಲ್ಲಿ 261ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, 1,150 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಕ್ತಾಯವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!