ಸರ್ಕಾರದಿಂದ ಬರುವ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಬದ್ಧ: ಶಾಸಕ ಸಿಮೆಂಟ್ ಮಂಜು

ಹೊಸದಿಂಗತ ಡಿಜಿಟಲ್ ಡೆಸ್ಕ್:

ಕ್ಷೇತ್ರದ ಪ್ರತಿ ಗ್ರಾಮಗಳಿಗೂ ಸರ್ಕಾರದಿಂದ ಬರುವ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಬದ್ದನಾಗಿದ್ದೇನೆ ಎಂದು ಆಲೂರು-ಸಕಲೇಶಪುರ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ತಿಳಿಸಿದರು.

ಆಲೂರು ತಾಲ್ಲೂಕಿನ ಪಾಳ್ಯ ಹೋಬಳಿ ಸಿಂಗಟಗೆರೆ- ಕಗ್ಗರವಳ್ಳಿ ಗ್ರಾಮಕ್ಕೆ ತಲುಪುವ ರಸ್ತೆಗೆ ಕಾಂಕ್ರೀಟ್ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಅವರು, ಆಲೂರು-ಸಕಲೇಶಪುರ ಕ್ಷೇತ್ರದ ಗ್ರಾಮೀಣ ಭಾಗದಲ್ಲಿ ಸ್ವಾತಂತ್ರ್ಯ ಬಂದು ಏಳೆಂಟು ದಶಕಗಳು ಕಳೆದರೂ ಜನರು ಕುಡಿಯುವ ನೀರು, ರಸ್ತೆ, ಚರಂಡಿ, ವಿದ್ಯುತ್ ಒದಗಿಸುವಂತೆ ಬೇಡಿಕೆ ಸಲ್ಲಿಸುತ್ತಿದ್ದಾರೆ.

ಗ್ರಾಮೀಣ ಭಾಗಕ್ಕೆ ತೆರಳುವ ಒಳ ರಸ್ತೆಗಳು ತೀರಾ ಹದಗೆಟ್ಟಿದೆ ಮಳೆಗಾಲದಲ್ಲಿ ಈ ರಸ್ತೆಗಳಲ್ಲಿ ಸಂಚರಿಸಲು ಸಾದ್ಯವಿಲ್ಲದಂತಹ ಪರಿಸ್ಥಿತಿ ಇದೆ. ಈ ಹಿನ್ನೆಲೆಯಲ್ಲಿ ಹೆಚ್ಚು ಅನುದಾನಗಳನ್ನು ಗ್ರಾಮೀಣ ರಸ್ತೆಗೆ ಮೀಸಲಿಡಲಾಗಿದೆ ಈಗಾಗಲೇ ಸಿಂಗಟಗೆರೆ, ಅರೆಹಳ್ಳದ ಕೊಪ್ಪಲು, ದಡದಹಳ್ಳಿ, ಬೆಕ್ಕಡಿ ಗ್ರಾಮದಲ್ಲಿ ಸುಮಾರು 1 ಕೋಟಿ ರೂ. ಅನುದಾನದಲ್ಲಿ ಕಾಮಗಾರಿ ಪ್ರಾರಂಭವಾಗಿದೆ.

ಕ್ಷೇತ್ರದ ವ್ಯಾಪ್ತಿಯಲ್ಲಿ ತೀರಾ ಹದಗೆಟ್ಟಿರುವ ರಸ್ತೆಗಳನ್ನು ಗುರುತಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಲಾಗಿದೆ. ಈ ಕುರಿತು ಹಂತ ಹಂತವಾಗಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಭರಣ್, ಕಟ್ಟೆಗದ್ದೆ ನಾಗರಾಜ್, ಹನುಮಂತೇಗೌಡ, ಗುತ್ತಿಗೆದಾರ ಪುರುಷೋತ್ತಮ, ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಮಧು ದೊರೇಗೌಡ ಸೇರಿದಂತೆ ಸಿಂಗಟಗೆರೆ ಗ್ರಾಮಸ್ಥರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!