ಭಾರತದೊಂದಿಗೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳಲು ಬದ್ಧ: ಬ್ರಿಟನ್ ಪ್ರಧಾನಿ ರಿಷಿ ಸುನಕ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಜಿ 20 ಸಭೆಯಲ್ಲಿ ಬ್ರಿಟಿಷ್ ಪ್ರಧಾನಿ ರಿಷಿ ಸುನಕ್ ಹಾಗೂ ಪ್ರಧಾನಿ ಮೋದಿ ಸಹಿತ ಹಲವು ವಿಶ್ವ ನಾಯಕರ ಜೊತೆಗೆ ಹಲವು ವಿಚಾರಗಳನ್ನು ಚರ್ಚೆ ನಡೆಸಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಿಷಿ ಸುನಕ್, ಕೆಲವು ವಾರಗಳ ಕಾಲ ಬ್ರಿಟನ್ ಪ್ರಧಾನಿಯಾಗಿದ್ದ ಲಿಜ್ ಟ್ರಸ್ ಅವರಿಗಿಂತ ಭಿನ್ನವಾಗಿ ವ್ಯಾಪಾರ ಒಪ್ಪಂದಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು. ಭಾರತದಂತಹ ದೇಶಗಳೊಂದಿಗೆ ಮಾತುಕತೆಗಳಿಗಾಗಿ ಆತುರಪಡುವುದಿಲ್ಲ ಎಂದು ಹೇಳಿದ್ದಾರೆ.

ಭಾರತದೊಂದಿಗೆ ಒಪ್ಪಂದ ಮಾಡಿಕೊಳ್ಳಲು ಬದ್ಧರಾಗಿದ್ದೇವೆ. ವ್ಯಾಪಾರ ಒಪ್ಪಂದಗಳ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲು ನಾನು ಸಮಯವನ್ನು ತೆಗೆದುಕೊಳ್ಳಲು ಬಯಸುತ್ತೇನೆ ಎಂದು ರಿಷಿ ಹೇಳಿದ್ದಾರೆ.

ಬ್ರಿಟನ್ ಮತ್ತು ಯುನೈಟೆಡ್ ಸ್ಟೇಟ್ಸ್ ತಮ್ಮ ಆರ್ಥಿಕ ಸಂಬಂಧವನ್ನು ಗಾಢವಾಗಿಸಬಹುದು. ಆದರೆ ತಾನು ಯುಎಸ್ ಅಧ್ಯಕ್ಷ ಜೋ ಬಿಡೆನ್ ಅವರೊಂದಿಗೆ ವ್ಯಾಪಾರ ಒಪ್ಪಂದದ ಬಗ್ಗೆ ನಿರ್ದಿಷ್ಟವಾಗಿ ಮಾತನಾಡಿಲ್ಲ ಎಂದು ಅವರು ಹೇಳಿದರು.
ಆದರೆ ನಮ್ಮ ಆರ್ಥಿಕ ಸಂಬಂಧವನ್ನು ಗಾಢವಾಗಿಸಲು ಅಮೆರಿಕದೊಂದಿಗೆ ಹೆಚ್ಚು ವ್ಯಾಪಾರ ಮಾಡುವ ನಮ್ಮ ಸಾಮರ್ಥ್ಯದ ಬಗ್ಗೆ ನಾನು ಆಶಾವಾದ ಹೊಂದಿದ್ದೇನೆ. ಅದು ವಿಭಿನ್ನ ರೀತಿಯಲ್ಲಿ ಸಂಭವಿಸಬಹುದು ಸುನಕ್ ಹೇಳಿದ್ದಾರೆ.

ಮೋದಿ-ರಿಷಿ ಸುನಕ್ ಭೇಟಿ

ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಬಾಲಿಯಲ್ಲಿ ಜಿ20 ಶೃಂಗಸಭೆಯಲ್ಲಿ ಬ್ರಿಟಿಷ್ ಪ್ರಧಾನಿ ರಿಷಿ ಸುನಕ್ ಅವರನ್ನು ಭೇಟಿ ಮಾಡಿದ್ದು ಉಭಯ ದೇಶಗಳ ನಡುವಿನ ವ್ಯಾಪಾರವನ್ನು ಹೆಚ್ಚಿಸುವ ಮಾರ್ಗಗಳ ಕುರಿತು ಚರ್ಚಿಸಿದರು.

ಈ ಕುರಿತು ಟ್ವಿಟ್ ಮಾಡಿದ ಪ್ರಧಾನಿ ಮೋದಿ, ಯುನೈಟೆಡ್ ಕಿಂಗ್‌ಡಮ್‌ನೊಂದಿಗೆ ದೃಢವಾದ ಬಾಂಧವ್ಯಕ್ಕೆ ಭಾರತವು ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತದೆ. ನಾವು ವಾಣಿಜ್ಯ ಸಂಪರ್ಕಗಳನ್ನು ಹೆಚ್ಚಿಸುವ ಮಾರ್ಗ, ಭಾರತದ ರಕ್ಷಣಾ ಸುಧಾರಣೆಗಳ ಸಂದರ್ಭದಲ್ಲಿ ಭದ್ರತಾ ಸಹಕಾರದ ವ್ಯಾಪ್ತಿಯನ್ನು ಹೆಚ್ಚಿಸುವುದು ಮತ್ತು ಜನರ ನಡುವಿನ ಸಂಬಂಧವನ್ನು ಇನ್ನಷ್ಟು ಗಟ್ಟಿಗೊಳಿಸುವುದರ ಬಗ್ಗೆ ಚರ್ಚಿಸಿದ್ದೇವೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!