Monday, August 15, 2022

Latest Posts

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತೀಯ ಕುಸ್ತಿಪಟುಗಳ ಬಲ: ಒಂದೇ ದಿನದಲ್ಲಿ 3 ಚಿನ್ನದ ಬೇಟೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಇಂಗ್ಲೆಂಡಿನ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಕುಸ್ತಿಪಟುಗಳು ತಮ್ಮ ಬಲ ಪ್ರದರ್ಶನ ಮಾಡಿದ್ದಾರೆ. ಒಂದೇ ದಿನದಲ್ಲಿ ಮೂರು ಚಿನ್ನ ಹಾಗೂ ಒಂದು ಬೆಳ್ಳಿ ಗೆದ್ದು ಗೆಲುವಿನ ನಗೆ ಬೀರಿದರು. ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಮತ್ತು ದೀಪಕ್ ಪುನಿಯಾ ಚಿನ್ನಕ್ಕೆ ಮುತ್ತಿಟ್ಟಿದ್ದಾರೆ. ಗೆದ್ದ ಆಟಗಾರರನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಅಭಿನಂದಿಸಿದ್ದಾರೆ.

ಫ್ರೀ ಸ್ಟೈಲ್ ಕುಸ್ತಿ 86ಕೆಜಿ ವಿಭಾಗದಲ್ಲಿ ದೀಪಕ್ ಪುನಿಯಾ ಫೈನಲ್‌ನಲ್ಲಿ ಪಾಕಿಸ್ತಾನದ ಆಟಗಾರ ಇನಾಮ್ ಪೈ ಅವರನ್ನು 3-0 ಅಂತರದಿಂದ ಸೋಲಿಸಿ ಚಿನ್ನ ಗೆದ್ದರು. ಈ ಗೆಲುವಿನೊಂದಿಗೆ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಚಿನ್ನದ ಪದಕಗಳ ಸಂಖ್ಯೆ 9ಕ್ಕೆ ತಲುಪಿದೆ. ಒಟ್ಟು ಪದಕಗಳ ಸಂಖ್ಯೆ 25ಕ್ಕೆ ತಲುಪಿದೆ.

ರಿಯೊ ಒಲಿಂಪಿಕ್ಸ್ ಕಂಚಿನ ಪದಕ ವಿಜೇತೆ ಮತ್ತು ಸ್ಟಾರ್ ಕುಸ್ತಿಪಟು ಸಾಕ್ಷಿ ಮಲಿಕ್ 62 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ ಕೆನಡಾದ ಅನಾ ಗೊಡಿನೆಜ್ ವಿರುದ್ಧ ಗೆದ್ದರು ಚಿನ್ನ ಗೆದ್ದ ಮೂವರು ಆಟಗಾರರನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.

ಪುರುಷರ ಫ್ರೀಸ್ಟೈಲ್ 65 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿದ್ದ ಬಜರಂಗ್ ಪುನಿಯಾ ಕೆನಡಾದ ಲಾಚಲನ್ ಮೆಕ್‌ನೀಲ್ ಅವರನ್ನು 2-9 ಪಾಯಿಂಟ್‌ಗಳಿಂದ ಸೋಲಿಸಿ ಚಿನ್ನದ ಪದಕ ಗೆದ್ದರು. 2014ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದ 28ರ ಹರೆಯದ ಸ್ಟಾರ್ ಕುಸ್ತಿಪಟು 2018ರಲ್ಲಿ ವೇಲ್ಸ್‌ನ ಕೇನ್ ಚಾರಿಗ್ ಅವರನ್ನು ಸೋಲಿಸಿ ಚಿನ್ನ ಗೆದ್ದಿದ್ದರು. ಇದೀಗ ಮತ್ತೊಂದು ಚಿನ್ನದ ಪದಕವನ್ನು ತನ್ನ ಖಾತೆಗೆ ಜಮಾ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss