ಕಾಮನ್ ವೆಲ್ತ್ ಗೇಮ್ಸ್: ಕಂಚು ಗೆದ್ದ ಕರಾವಳಿಯ ಗುರುರಾಜ್ ಗೆ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ ಅಭಿನಂದನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕಾಮನ್ವೆಲ್ತ್ ಗೇಮ್ಸ್ 2022ರಲ್ಲಿ ಗುರುರಾಜ ಪೂಜಾರಿ ಪುರುಷರ 61 ಕೆಜಿ ವೇಟ್‌ ಲಿಫ್ಟಿಂಗ್‌ನಲ್ಲಿ ಒಟ್ಟು 269 ಕೆಜಿ (118 +151) ಎತ್ತುವ ಮೂಲಕ ಕಂಚಿನ ಪದಕವನ್ನ ಗೆದ್ದರು.
ಕರ್ನಾಟಕದ ಕುಂದಾಪುರದವರಾದ ಪಿ. ಗುರುರಾಜ ಅವರಿಗೆ ಪ್ರಧಾನಿ ಮೋದಿ ಸೇರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿನಂದಿಸಿದ್ದಾರೆ.

ಟ್ವೀಟ್‌ ಮೂಲಕ ಶುಭ ಕೋರಿರುವ ಮೋದಿ, ಅಭಿನಂದನೆ ಸಲ್ಲಿಸಿದ್ದು, ಅತ್ಯತ್ತಮ ಪ್ರದರ್ಶನ ತೋರಿದ ಅವರ ಕ್ರೀಡಾ ಪಯಣದಲ್ಲಿ ಇನ್ನೂ ಹಲವು ಮೈಲಿಗಲ್ಲುಗಳು ಮೂಡಲಿ ಎಂದು ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಸಿಎಂ ಅಭಿನಂದನೆ
‘ಕಾಮನ್ ವೆಲ್ತ್ ಕ್ರೀಡಾಕೂಟದ 61 ಕೆಜಿ ವೈಟ್ ಲಿಫ್ಟಿಂಗ್ ವಿಭಾಗದಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ರಾಷ್ಟ್ರದ ಕೀರ್ತಿ ಪತಾಕೆಯನ್ನು ಎತ್ತರಕ್ಕೇರಿಸಿದ ಪಿ. ಗುರುರಾಜ ಅವರಿಗೆ ಹಾರ್ದಿಕ ಅಭಿನಂದನೆಗಳು. ಅವರು ಕರ್ನಾಟಕದ ಕುಂದಾಪುರದವರು ಎನ್ನುವುದು ನಾಡಿಗೆ ಹೆಮ್ಮೆಯ ಸಂಗತಿ. ಅವರಿಗೆ ಉಜ್ವಲ ಯಶಸ್ಸು ಪ್ರಾಪ್ತವಾಗಲಿ ಎಂದು ಹಾರೈಸುತ್ತೇನೆ’ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!