ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಮನ್ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೊಂದು ಬೆಳ್ಳಿ ಪದಕ ಬಂದಿದೆ.
ವೇಟ್ ಲಿಫ್ಟರ್ ವಿಕಾಸ್ ಠಾಕೂರ್ ಪುರುಷರ 96 ಕೆಜಿ ವಿಭಾಗದಲ್ಲಿ ಒಟ್ಟು 346 ಕೆಜಿ ಭಾರ ಎತ್ತುವ ಮೂಲಕ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದಾರೆ.
ಹಾಲಿ ಗೇಮ್ಸ್‌ನಲ್ಲಿ ಭಾರತ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಗೆದ್ದ 8ನೇ ಪದಕ ಇದಾಗಿದೆ. ವಿಕಾಸ್ ಠಾಕೂರ್ 346 ಕೆಜಿ ಭಾರ ಎತ್ತುವ ಮೂಲಕ ಬೆಳ್ಳಿ ಪದಕ ಜಯಿಸಿದರು. ಸ್ನ್ಯಾಚ್ ವಿಭಾಗದಲ್ಲಿ ಗರಿಷ್ಠ 155 ಕೆಜಿ ಭಾರ ಎತ್ತಿದರೆ, ಕ್ಲೀನ್ ಆಂಡ್ ಜರ್ಕ್‌ನಲ್ಲಿ ಗರಿಷ್ಠ 191 ಕೆಜಿ ಭಾರ ಎತ್ತುವ ಮೂಲಕ ಪದಕ ಗೆದ್ದರು.
ಠಾಕೂರ್ 2014 ರಲ್ಲಿ ನಡೆದ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಬೆಳ್ಳಿ ಮತ್ತು 2018 ರಲ್ಲಿ ಕಂಚು ಪದಕ ಗೆದ್ದು ಸಂಭ್ರಮಿಸಿದ್ದರು.