Sunday, October 2, 2022

Latest Posts

ಕಾಮನ್‌ವೆಲ್ತ್ ಕರಾಟೆ ಚಾಂಪಿಯನ್ ಶಿಪ್: ಭಾರತ ತಂಡಕ್ಕೆ ಅರುಣ್ ಮಾಚಯ್ಯ ನಾಯಕ

ಹೊಸದಿಗಂತ ವರದಿ ಮಡಿಕೇರಿ:

ಸೆ.7ರಿಂದ ಲಂಡನ್‌ನ ಬರ್ಮಿಂಗ್ ಹ್ಯಾಮ್‌ನಲ್ಲಿ ನಡೆಯಲಿರುವ ಕಾಮನ್ವೆಲ್ತ್ ಕರಾಟೆ ಚಾಂಪಿಯನ್ ಶಿಪ್‌ಗೆ ಭಾರತ ತಂಡದ ನಾಯಕರಾಗಿ ಹಿರಿಯ ಕರಾಟೆಪಟು ಮತ್ತು ವಿಧಾನಪರಿಷತ್ ಮಾಜಿ ಸದಸ್ಯ ಸಿ.ಎಸ್.ಅರುಣ್ ಮಾಚಯ್ಯ ಆಯ್ಕೆಯಾಗಿದ್ದಾರೆ. ಜಗತ್ತಿನ 70 ರಾಷ್ಟ್ರಗಳು ಪಾಲ್ಗೊಳ್ಳಲಿರುವ ಕಾಮನ್ ವೆಲ್ತ್ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಪಾಲ್ಗೊಳ್ಳಲು ಭಾರತ ತಂಡಕ್ಕೆ ಆಯ್ಕೆಗೊಂಡಿರುವ 70 ಕರಾಟೆಪಟುಗಳ ತಂಡದ ನಾಯಕತ್ವ ವಹಿಸಿಕೊಂಡಿರುವ ಅರುಣ್ ಮಾಚಯ್ಯ ಅವರು, ತಮ್ಮ ತಂಡದೊಂದಿಗೆ ಈಗಾಗಲೇ ಲಂಡನ್ ತಲುಪಿದ್ದಾರೆ.

ದಕ್ಷಿಣ ಭಾರತ ಕರಾಟೆ ಫೆಡರೇಷನ್ ಅಧ್ಯಕ್ಷರು, ಕರಾಟೆ ಇಂಡಿಯಾ ಆರ್ಗನೈಸೇಷನ್ ಹಿರಿಯ ಉಪಾಧ್ಯಕ್ಷರು ಹಾಗೂ ಅಖಿಲ ಕರ್ನಾಟಕ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ಅಧ್ಯಕ್ಷರೂ ಆಗಿರುವ ಸಿ.ಎಸ್. ಅರುಣ್ ಮಾಚಯ್ಯ ಅವರು ಈ ಹಿಂದೆ ವಿಶ್ವದ ಹಲವೆಡೆ ನಡೆದ ಹಲವಾರು ಅಂತರರಾಷ್ಟ್ರೀಯ ಚಾಂಪಿಯನ್ ಶಿಪ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!