ಕಾಮನ್‌ವೆಲ್ತ್ ಮಹಿಳಾ ಕ್ರಿಕೆಟ್: ಪಾಕ್ ವಿರುದ್ಧ ಗೆದ್ದು ಬೀಗಿದ ಭಾರತ

ಹೊಸದಿಗಂತ ಡಿಜಿಟಲ್‌ ಡೆಸ್ಕ್

ಕಾಮನ್‌ವೆಲ್ತ್ ಗೇಮ್ಸ್ ಮಹಿಳಾ ಕ್ರಿಕೆಟ್ ಟೂರ್ನಿಯಲ್ಲಿ ಭಾರತ ಪಾಕ್ ವಿರುದ್ಧ ಗೆಲುವು ಸಾಧಿಸಿದೆ.
ಮೊದಲ ಪಂದ್ಯದಲ್ಲಿ ಸೋಲು ಕಂಡಿದ್ದ ಭಾರತ ಇದೀಗ ಪಾಕಿಸ್ತಾನ ವಿರುದ್ಧ 8 ವಿಕೆಟ್ ಗೆಲುವು ದಾಖಲಿಸಿ ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಜೀವಂತವಾಗಿದೆ.
ಇತ್ತ ಸತತ ಎರಡು ಸೋಲು ಕಂಡಿರುವ ಪಾಕಿಸ್ತಾನ ಟೂರ್ನಿಯಿಂದ ಬಹುತೇಕ ಹೊರಬಿದ್ದಿದೆ.
ಮಳೆಯಿಂದಾಗಿ ಪಂದ್ಯ ವಿಳಂಬವಾಗಿ ಆರಂಭಗೊಂಡಿತ್ತು. ಹೀಗಾಗಿ 18 ಓವರ್‌ಗಳಿಗೆ ಪಂದ್ಯ ಸೀಮಿತಗೊಳಿಸಲಾಗಿತ್ತು. 18 ಓವರ್‌ನಲ್ಲಿ ಪಾಕಿಸ್ತಾನ 99 ರನ್ ಗೆ ಆಲೌಟ್ ಆಗಿತ್ತು.
100 ರನ್ ಟಾರ್ಗೆಟ್ ಪಡೆದ ಭಾರತ ಮಹಿಳಾ ತಂಡ ಉತ್ತಮ ಆರಂಭ ಪಡೆಯಿತು. ಶೆಫಾಲಿ ವರ್ಮಾ ಹಾಗೂ ಸ್ಮೃತಿ ಮಂದನಾ ಮೊದಲ ವಿಕೆಟ್‌ಗೆ 61 ರನ್ ಜೊತೆಯಾಟ ನೀಡಿದರು. ಶೆಫಾಲಿ 16 ರನ್ ಗೆ ಔಟಾದರು. ಸ್ಮೃತಿ ಮಂದಾನ ಆಕರ್ಷಕ ಹಾಫ್ ಸೆಂಚುರಿ ಸಿಡಿಸಿ ಮಿಂಚಿದರು.
ಅಂತಿಮ ಹಂತದಲ್ಲಿ ಮೆಘನಾ 14 ರನ್ ಗೆ ಔಟಾದರು. ರೋಡ್ರಿಗಸ್ ಜೊತೆ ಸೇರಿದ ಮಂದನಾ ಭಾರತದ ಗೆಲುವು ಖಚಿತಪಡಿಸಿದರು. 11.4 ಓವರ್‌ಗಳಲ್ಲಿ ಭಾರತ ಮಹಿಳಾ ತಂಡ 2 ವಿಕೆಟ್ ಕಳೆದುಕೊಂಡು ಗೆಲುವು ಸಾಧಿಸಿತು. ಸ್ಮೃತಿ ಮಂದನಾ ಅಜೇಯ 63 ರನ್ ಗಳಿಸಿ ತಂಡದ ಗೆಲುವಿಗೆ ತಮ್ಮ ಕಾಣಿಕೆ ನೀಡಿದರು.  ಈ ಮೂಲಕ ಭಾರತ  8 ವಿಕೆಟ್ ಗೆಲುವು ದಾಖಲಿಸಿದೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!