ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಚುನಾವಣಾ ಕಣ ರಂಗೇರಿದ್ದು, ಎಲ್ಲೆಡೆ ಬಿರುಸಿನ ಮತದಾನ ನಡೆಯುತ್ತಿದೆ. ಈ ನಡುವೆ ಯಶವಂತಪುರ ಮತಗಟ್ಟೆ ಬಳಿ ಮತದಾರರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದ ಯಶವಂತಪುರದ ರೋಟರಿ ಮತಗಟ್ಟೆಯಲ್ಲಿ ಗಲಾಟೆ ನಡೆದಿದೆ. ಮತದಾನ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಮತದಾರರು ಗಲಾಟೆ ಮಾಡಿದ್ದು, ಮತಗಟ್ಟೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತ ಹಾಕಲು ಮತದಾರರು ಕ್ಯೂ ಕಟ್ಟಿ ನಿಂತಿದ್ದಾರೆ.