ಹೊಸದಿಗಂತ ವರದಿ, ಕಲಬುರಗಿ:
ಆಳಂದ ಪಟ್ಟಣದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಂಬೆಳಗ್ಗೆ ಪೊಲೀಸರು ಕಾರ್ಯಾಚರಣೆಆರಂಭಿಸಿದ್ದಾರೆ
ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಪ್ರತ್ಯೇಕ ಎಫ್ ಐ ಆರ್ ದಾಖಲಾಗಿದ್ದು, 60ಕ್ಕೂ ಅಧಿಕ ಜನರ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಅಲ್ಲದೆ ಈಗಾಗಲೇ 56 ಜನರನ್ನು ವಶಕ್ಕೆ ಪಡೆದು ವಿಚಾರಣೆ ಕೂಡಾ ನಡೆಸುತ್ತಿದ್ದಾರೆ. ಇನ್ನೂ ಹಲವರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ.
ಮಹಾಶಿವರಾತ್ರಿ ಪ್ರಯುಕ್ತ ಆಳಂದ ಲಾಡ್ಲೆ ಮಶಾಕ್ ದರ್ಗಾ ಆವರಣದಲ್ಲಿರುವ ರಾಘವ ಚೈತನ್ಯ ಶಿವಲಿಂಗಕ್ಕೆ ಗಂಗಾಭೀಷೇಕ ಹಾಗೂ ಪೂಜೆ ಸಲ್ಲಿಸಲು ಹೋದಾಗ ಎರಡು ಕೋಮುಗಳ ಮದ್ಯೆ ಘರ್ಷಣೆವುಂಟಾಗಿತ್ತು. ಒಂದು ಕೋಮಿನವರು ಇನ್ನೊಂದು ಕೋಮಿನ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಕಲ್ಲು ತೂರಾಟದಲ್ಲಿ ಹಲವರಿಗೆ ಗಾಯಗಳಾಗಿವೆ. ಪೊಲೀಸರು ಲಾಠಿ ಚಾರ್ಜ್ ಮಾಡಿ ವಾತಾವರಣ ತಿಳಿಗೊಳಿಸಿದ್ದರು.
ಕಲ್ಲು ತೂರಾಟದಲ್ಲಿ ಕೇಂದ್ರ ಸಚಿವ ಭಗವಂತ ಖೂಭಾ, ಶಾಸಕರು, ಮಾಜಿ ಶಾಸಕರು, ಜಿಲ್ಲಾಧಿಕಾರಿಗಳ ಕಾರುಗಳನ್ನು ಕಿಡಗೇಡಿಗಳು ಜಖಂಗೊಂಡಿವೆ. ಸದ್ಯ ಆಳಂದ ಪಟ್ಟಣದಲ್ಲಿ ಬೂದಿ ಮುಚ್ಚಿದ ಕೆಂಡದಂತ ವಾತಾವರಣ ಇದೆ.