ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಾಜಾದಲ್ಲಿರುವ ನೆರವಿನ ಗುಂಪುಗಳಿಗೆ ಸಂಪರ್ಕ ವ್ಯವಸ್ಥೆ ನೀಡುವುದಕ್ಕೆ ಟೆಸ್ಲಾ ಸಿಇಒ ಎಲಾನ್ ಮಸ್ಕ್ ಮುಂದಾಗಿದ್ದು, ತಮ್ಮ ಉಪಗ್ರಹ ಆಧಾರಿತ ಸಂವಹನ ವ್ಯವಸ್ಥೆ ಸ್ಟಾರ್ ಲಿಂಕ್ ಸಂವಹನ ಸಂಪರ್ಕ ವ್ಯವಸ್ಥೆ ನೀಡಲಿದೆ ಎಂದು ಟೆಸ್ಲಾ ಸಿಇಒ ಎಲಾನ್ ಮಸ್ಕ್ ಹೇಳಿದ್ದಾರೆ.
2.2 ಮಿಲಿಯನ್ ಜನಸಂಖ್ಯೆ ಇರುವ ಪ್ರದೇಶಕ್ಕೆ ಎಲ್ಲಾ ರೀತಿಯ ಸಂವಹನ ವ್ಯವಸ್ಥೆಯನ್ನು ಸಂಪೂರ್ಣ ಕಡಿತಗೊಳಿಸಿರುವುದು ಒಪ್ಪಲು ಸಾಧ್ಯವಿಲ್ಲ ಎಂದು ಅಮೇರಿಕಾದ ಪ್ರತಿನಿಧಿ ಅಲೆಕ್ಸಾಂಡ್ರಿಯಾ ಒಕಾಸಿಯೊ-ಕಾರ್ಟೆಜ್ ಹೇಳಿದ್ದ ಬೆನ್ನಲ್ಲೇ ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮಸ್ಕ್, ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಸ್ಕ್ ಈ ಘೋಷಣೆ ಮಾಡಿದ್ದಾರೆ.
ಪತ್ರಕರ್ತರು, ವೈದ್ಯಕೀಯ ವೃತ್ತಿಪರರು, ಮಾನವೀಯ ಪ್ರಯತ್ನಗಳಲ್ಲಿ ತೊಡಗಿರುವವರು ಮತ್ತು ಮುಗ್ಧರು ಎಲ್ಲರೂ ಅಪಾಯದಲ್ಲಿದ್ದಾರೆ ಎಂದು ಗಾಜಾ ಪರಿಸ್ಥಿತಿಯ ಕುರಿತು ಒಕಾಸಿಯೊ-ಕಾರ್ಟೆಜ್ ತಮ್ಮ ಪೋಸ್ಟ್ನಲ್ಲಿ ಹೇಳಿ, ಯುಎಸ್ ಐತಿಹಾಸಿಕವಾಗಿ ಈ ರೀತಿಯ ನಡೆಗಳನ್ನು ಖಂಡಿಸಿದೆ ಎಂದು ಹೇಳಿದ್ದರು.
ಈ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಮಸ್ಕ್, ‘ಸ್ಟಾರ್ಲಿಂಕ್ ಗಾಜಾದಲ್ಲಿ ಅಂತಾರಾಷ್ಟ್ರೀಯವಾಗಿ ಗುರುತಿಸಲ್ಪಟ್ಟ ಸಹಾಯ ಸಂಸ್ಥೆಗಳಿಗೆ ಸಂವಹನ ಸಂಪರ್ಕವನ್ನು ಕಲ್ಪಿಸಲಿದೆ’ ಎಂದು ಹೇಳಿಕೆ ನೀಡಿದ್ದಾರೆ.