ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, May 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಸಮುದಾಯ ಭವನದ ಆವರಣದಲ್ಲಿ ‘ಶ್ರೀ ರಾಮ ಕಥಾಮೃತ ಸಪ್ತಾಹ’ ಕಾರ್ಯಕ್ರಮ

ಹೊಸ ದಿಗಂತ ವರದಿ, ಶಿವಮೊಗ್ಗ :

ಶ್ರೀರಾಮ ಕಾಲ್ಪನಿಕ ವ್ಯಕ್ತಿ ಎಂದು ಸುಪ್ರೀಂ ಕೋರ್ಟ್ ಗೆ ಪ್ರಮಾಣ ಪತ್ರ ಸಲ್ಲಿಸಿದವರೂ ಕೂಡ ಇಂದು ಶ್ರೀರಾಮ ಮಂದಿರ‌ ನಿರ್ಮಾಣಕ್ಕೆ ದೇಣಿಗೆ ಕೊಡಲು ಮುಂದೆ ಬರುತ್ತಿದ್ದಾರೆ. ಇದು ಶ್ರೀರಾಮನ ಶಕ್ತಿಯಾಗಿದೆ ಎಂದು ಮಾಜಿ ಸಭಾಪತಿ ಡಿ.ಎಚ್. ಶಂಕರಮೂರ್ತಿ ಹೇಳಿದರು.
ನಗರದ ಶುಭಮಂಗಳ ಸಮುದಾಯ ಭವನದ ಆವರಣದಲ್ಲಿ, ಶ್ರೀಗಂಧ ಸಾಂಸ್ಕೃತಿಕ ಸಂಸ್ಥೆ, ಶನೇಶ್ಚರ ದೇವಾಲಯ ಟ್ರಸ್ಟ್ ಹಾಗೂ ನಾಟ್ಯಶ್ರೀ ಕಲಾ ತಂಡ ಇವರುಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿರುವ ಶ್ರೀ ರಾಮ ಕಥಾಮೃತ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಾಜಿ ಪ್ರಧಾನಿಯೊಬ್ಬರು ಈ ರೀತಿ ಪ್ರಮಾಣ ಪತ್ರ ಸಲ್ಲಿಸಿದ್ದರು. ಅವರೇ ಈಗ ದೇಣಿಗೆ ನೀಡಲು ಮುಂದೆ ಬರುತ್ತಿದ್ದಾರೆ. ಇನ್ನು ಕೆಲವರು ಅಲ್ಲಿಯ ರಾಮನಿಗೆ ದೇಣಿಗೆ ನೀಡೋಲ್ಲ. ನಮ್ಮೂರಿನಲ್ಲಿ ಶ್ರೀರಾಮ ಮಂದಿರ ಕಟ್ಟಿದರೆ ಅದಕ್ಕೆ ದೇಣಿಗೆ ನೀಡುವುದಾಗಿ ಹೇಳುತ್ತಿದ್ದಾರೆ. ಇದು ಶ್ರೀರಾಮನ ಶಕ್ತಿಯಾಗಿದೆ ಎಂದರು.
ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಪ್ರಸನ್ನನಾಥ ಸ್ವಾಮೀಜಿ, ರಾಮಾಯಣ, ಮಹಾಭಾರತದಂತಹ ಮಹಾಕಾವ್ಯಗಳನ್ನು ಓದಿದಾಗ, ಕಥೆ ಕೇಳಿದಾಗ ಪ್ರತಿ ವ್ಯಕ್ತಿಯಲ್ಲಿ ಹೊಸ ಚೈತನ್ಯ, ಆತ್ಮವಿಶ್ವಾಸ ಬೆಳೆಯುತ್ತದೆ. ಸನಾತನ ಹಿಂದೂ ಸಂಸ್ಕೃತಿ ಉಳಿದಿದೆ ಎಂದರೆ ಅದು ಇಂತಹ ಮಹಾ ಕಾವ್ಯಗಳಿಂದ ಎಂದರು.
ರಾಮನ ಆದರ್ಶ, ಸೀತೆಯ ಔದಾರ್ಯ, ಲಕ್ಷ್ಮಣನ ಭಾತೃತ್ವ, ಆಂಜನೇಯನ ನಿಷ್ಠೆ ಎಲ್ಲರಿಗೂ ಪ್ರೇರಣೆ. ಭಾರತೀಯ ಸಂಸ್ಕೃತಿಯಲ್ಲಿ ಮಹಿಳೆಗೆ ವಿಶಿಷ್ಟ ಗೌರವ ಬಂದಿರುವುದು ಸೀತೆಯಿಂದ ಎಂದರು.
ಶ್ರೀಗಂಧದ ಅಧ್ಯಕ್ಷರೂ ಆದ ಸಚಿವ ಕೆ.ಎಸ್.ಈಶ್ವರಪ್ಪ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಬಳಿಕ ವೀಣಾ ಬನ್ನಂಜೆ ಸುಂದರ ಕಾಂಡ ಕುರಿತು ಉಪನ್ಯಾಸ, ನಾಟ್ಯಶ್ರೀ ಕಲಾ ತಂಡದಿಂದ‌ ಯಕ್ಷಗಾನ ಪ್ರದರ್ಶನ ನಡೆಯಿತು.
ಶ್ರೀಗಂಧ ಸಂಚಾಲಕ ಬಿ.ಆರ್. ಮಧುಸೂದನ ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss