ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ನಡೆದ ಗಲಭೆಯಲ್ಲಿ ನಷ್ಟಕ್ಕೆ ಒಳಗಾದವರಿಗೆ ಪರಿಹಾರ ನೀಡಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಅವರು ಪ್ರಸುತ್ತ ನಾಗಮಂಗಲ ಶಾಂತವಾಗಿದೆ. ಪೊಲೀಸರ ವೈಫಲ್ಯವಿದೆ ಎಂದಿದ್ದು, ಪೊಲೀಸರ ಮೇಲೆ ಕ್ರಮ ತೆಗೆದುಕೊಂಡಿದ್ದೇವೆ.ಗಲಭೆಯಲ್ಲಿ ನಷ್ಟ ಆಗಿರುವುದಕ್ಕೆ ಪರಿಹಾರ ಕೊಡುವ ಕೆಲಸ ಮಾಡುತ್ತೇವೆ. ಯಾರು ಯಾರಿಗೆ ನಷ್ಟವಾಗಿದೆ ಪರಿಹಾರ ಕೊಡುತ್ತೇವೆ ಎಂದು ಸಿಎಂ ತಿಳಿಸಿದ್ದಾರೆ.
ನಾಗಮಂಗಲದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಹಿಂಸಾಚಾರಕ್ಕೆ ತಿರುಗಿದ್ದು, ಅನೇಕ ವಾಹನಗಳು, ಅಂಗಡಿ ಮುಂಗಟ್ಟುಗಳಿಗೆ ಬೆಂಕಿ ಹಚ್ಚಲಾಗಿತ್ತು. ಇದರಿಂದಾಗಿ ಭಾರಿ ಪ್ರಮಾಣದ ನಷ್ಟವಾಗಿತ್ತು.