ಸಿಎಂ ಗಾದಿಗಾಗಿ ಪೈಪೋಟಿ: ನಾಳೆ ಬೆಳಿಗ್ಗೆ ಕಾಂಗ್ರೆಸ್ ಹೈಕಮಾಂಡ್‌ ಫೈನಲ್ ಮೀಟಿಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕ ಸಿಎಂ ಆಯ್ಕೆ ಕಾಂಗ್ರೆಸ್ ಹೈಕಮಾಂಡ್‌ಗೆ ದೊಡ್ಡ ತಲೆನೋವು ಪರಿಣಮಿಸಿದ್ದು, ಸಿಎಂ ಗಾದಿಗಾಗಿ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಪಟ್ಟು ಹಿಡಿದಿದ್ದಾರೆ.

ಇಂದು ಸಂಜೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಜೊತೆ ಪ್ರತ್ಯೇಕ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಆದರೆ ಒಮ್ಮತ ಮೂಡದ ಕಾರಣ ನಾಳೆ ರಾಹುಲ್ ಗಾಂಧಿ ಜೊತೆ ಮಲ್ಲಿಕಾರ್ಜುನ ಖರ್ಗೆ ಮತ್ತೊಂದು ಸುತ್ತಿನ ಸಭೆ ನಡೆಸಲಿದ್ದಾರೆ. ಈ ಸಭೆ ಬಳಿಕ ಬೆಂಗಳೂರಿನಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಈ ಸಭೆಯಲ್ಲಿ ನೂತನ ಸಿಎಂ ಹೆಸರು ಘೋಷಣೆಯಾಗಲಿದೆ ಎಂದು ಮೂಲಗಳು ಹೇಳಿವೆ.

ನಾಳೆ ದೆಹಲಿಯಲ್ಲಿ ಬೆಳಿಗ್ಗೆ 11ಕ್ಕೆ ಸಿಎಂ ಆಯ್ಕೆ ಬಗ್ಗೆ ಫೈನ್ ಮೀಟಿಂಗ್ ನಡೆಯಲಿದೆ.ಈ ಬಳಿಕ ಕರ್ನಾಟಕದ ಮುಂದಿನ ಸಿಎಂ ಹೆಸರು ಪ್ರಕಟವಾಗಲಿದೆ.

ಈವರೆಗೆ ಸಿಎಲ್ ಪಿ ನಾಯಕನ ಹೆಸರು ಆಯ್ಕೆಗಾಗಿ ವೀಕ್ಷಕರ ವರದಿ, ಶಾಸಕರ ಅಭಿಪ್ರಾಯ, ಆಕಾಂಕ್ಷಿಗಳ ಅಭಿಪ್ರಾಯವನ್ನು ಸಂಗ್ರಹಿಸದಂತೆ ಸಭೆ ನಡೆಯಲಿದೆ. ಈ ಎಲ್ಲಾವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಸಿದ್ಧರಾಮಯ್ಯ ಭಾಗಿಯೊಂದಿಗೆ ಒಟ್ಟಾಗಿ ಚರ್ಚಿಸಿ, ಫೈಲನ್ ಮಾಡಲಿದ್ದಾರೆ.

ನಾಳೆ ಬೆಳಿಗ್ಗೆ 11ಕ್ಕೆ ದೆಹಲಿಯಲ್ಲಿ ನಡೆಯಲಿರುವ ಸಭೆ ತೀವ್ರ ಕುತೂಹಲ ಮೂಡಿಸಿದ್ದು, ನಾಳೆಯೇ ಕರ್ನಾಟಕದ ಮುಂದಿನ ಸಿಎಂ ಯಾರು ಎನ್ನುವ ಹೆಸರು ಕೂಡ ಕಾಂಗ್ರೆಸ್ ಹೈಕಮಾಂಡ್ ಪ್ರಕಟಿಸುವ ಸಾಧ್ಯತೆ ಇದೆ. ಅಲ್ಲಿಯವರೆಗೆ ಕಾದು ನೋಡಬೇಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!