Thursday, June 1, 2023

Latest Posts

ಸಿಎಂ ಗಾದಿಗೆ ಪೈಪೋಟಿ: ಖರ್ಗೆ ಭೇಟಿಯಾದ ಡಿ.ಕೆ ಶಿವಕುಮಾರ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿಗೆ ಇಂದು ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ , ಇದೀಗ ಖರ್ಗೆ ಅವರನ್ನು ಭೇಟಿಯಾಗಿದ್ದಾರೆ.

ಕರ್ನಾಟಕ ಮುಂದಿನ ಸಿಎಂ ಯಾರೆನ್ನುವ ಬಗ್ಗೆ ಚರ್ಚೆ ಜೋರಾಗಿ ನಡೆಯುತ್ತಿದೆ. ಸಿಎಲ್ ಪಿ ನಾಯಕನ ಆಯ್ಕೆ ನಿರ್ಧಾರವನ್ನು ಎಐಸಿಸಿ ಅಧ್ಯಕ್ಷರ ನಿರ್ಧಾರಕ್ಕೆ ಬಿಟ್ಟ ಬೆನ್ನಲ್ಲೇ ರಾಜ್ಯ ರಾಜಕೀಯ ದೆಹಲಿಗೆ ಶಿಫ್ಟ್ ಆಗಿದೆ.

ಇಂದು ಕಾಂಗ್ರೆಸ್ ಹೈಕಮಾಂಡ್ ಬುಲಾವ್ ಮೇರೆಗೆ ಡಿಕೆ ಶಿವಕುಮಾರ್ ದೆಹಲಿಗೆ ಭೇಟಿ ನೀಡಿದ್ದಾರೆ. ಇದೀಗ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿಯಾಗಿದ್ದಾರೆ.

ಖರ್ಗೆ ಕರ್ನಾಟಕದ ಮುಂದಿನ ಸಿಎಂ ಯಾರು ಎನ್ನುವ ಬಗ್ಗೆ ಚರ್ಚೆಯನ್ನು ಆರಂಭಿಸಿದ್ದಾರೆ ಎನ್ನಲಾಗುತ್ತಿದೆ. ಯಾರಾಗಲಿದೆ ಎಂದು ಕಾದು ನೋಡಬೇಕಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!