ವಯನಾಡಿನ ಜೊತೆ ಅಮೇಠಿಯಿಂದಲೂ ಸ್ಪರ್ಧೆ?: ಈ ಕುರಿತು ರಾಹುಲ್ ಗಾಂಧಿ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ಅಮೇಠಿಯಿಂದ ತಾವು ಸ್ಪರ್ಧಿಸುವ ಕುರಿತು ಹಬ್ಬಿರುವ ವದಂತಿಗಳಿಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ತೆರೆಎಳೆದಿದ್ದಾರೆ .

ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್‌ ಯಾದವ್‌ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿದ ವೇಳೆ ಈ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, , ‘ನಾನು ಅಮೇಠಿಯಿಂದ ಸ್ಪರ್ಧಿಸುವ ಬಗ್ಗೆ ಪಕ್ಷದ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ನಿರ್ಧಾರ ತೆಗೆದುಕೊಳ್ಳುತ್ತದೆ. ಈ ಕುರಿತು ಪಕ್ಷ ನೀಡುವ ಆದೇಶಕ್ಕೆ ನಾನು ಬದ್ಧನಾಗಿರುತ್ತೇನೆ’ ಎಂದು ಹೇಳಿದ್ದಾರೆ.

ವಯನಾಡ್‌ ಲೋಕಸಭಾ ಕ್ಷೇತ್ರದಲ್ಲಿ ಏಪ್ರಿಲ್‌ 26ರಂದು ಮತದಾನ ನಡೆಯಲಿದ್ದರೆ, ಅಮೇಠಿ ಕ್ಷೇತ್ರಕ್ಕೆ ಮೇ 20ರಂದು ಮತದಾನ ನಡೆಯುವುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!