ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ: ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತಾಗಿ ಚರ್ಚೆ ಆಗಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಲೋಕಸಭೆ ಚುನಾವಣೆಯಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ನನ್ನ ಹೆಸರು ಕೇಳಿ ಬಂದಿತ್ತು.ಈ ಬಾರಿ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಕೇಳಿ ಬರುತ್ತಿದೆ. ಆದರೆ, ಎಲ್ಲಿಯೂ ಸ್ಪರ್ಧಿಸಬೇಕೆಂಬ ಚರ್ಚೆ ನಡೆದಿಲ್ಲ ಎಂದು ತಿಳಿಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಹಿಂದೇಟು ಹಾಕುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಕೆಪಿಸಿಸಿ ಅಧ್ಯಕ್ಷರು ಈ ಬಗ್ಗೆ ಹೇಳಿದರೆ ಅಧಿಕೃತವಾಗುತ್ತದೆ ಎಂದು ತಿಳಿಸಿದ್ದಾರೆ,

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!