ಬಿಸಿ ತುಪ್ಪವಾದ ಕ್ರಿಸ್ಮಸ್ ಕೇಕ್: ನಟ ರಣಬೀರ್ ಕಪೂರ್ ವಿರುದ್ಧ ದೂರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಲಿವುಡ್ ನಟ ರಣಬೀರ್ ಕಪೂರ್ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದ ಮೇಲೆ ದೂರು ದಾಖಲಾಗಿದೆ.

ಈ ನಟ, ನಟಿ ಆಲಿಯಾ ಭಟ್ ಹಾಗೂ ಅವರ ಕುಟುಂಬದ ಸದಸ್ಯರ ಜೊತೆ ಕ್ರಿಸ್ಮಸ್ ಹಬ್ಬ ಆಚರಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದರಲ್ಲಿ ನಟ ರಣಬೀರ್, ಬೆಂಕಿ ಹಚ್ಚಿ ಬಳಿಕ ‘ಜೈ ಮಾತಾ ದಿ’ ಎಂದು ಘೋಷಣೆ ಕೂಗಿದ್ದಾರೆ.

ಇತರ ದೇವತೆಗಳನ್ನು ಆವಾಹನೆ ಮಾಡುವ ಮುನ್ನ ಅಗ್ನಿ ದೇವರನ್ನು ಆವಾಹನೆ ಮಾಡುವ ಸಂಪ್ರದಾಯ ಹಿಂದೂ ಧರ್ಮದಲ್ಲಿದೆ. ಹೀಗಾಗಿ ನಟ ಹಾಗೂ ಆತನ ಕುಟುಂಬ ಸದಸ್ಯರು ಇತರ ಧರ್ಮದ ಹಬ್ಬಾಚರಣೆ ಮಾಡುವಾಗ ಉದ್ದೇಶಪೂರ್ವಕವಾಗಿ ಮದ್ಯ ಸೇವಿಸಿ ‘ಜೈ ಮಾತಾ ದಿ’ ಎಂದು ಹೇಳಿದ್ದಾರೆ.

ಈ ಮೂಲಕ ಹಿಂದು ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಸಂಜಯ್ ತಿವಾರಿ ಎಂಬುವವರು ಘಾಟ್ಕೋಪರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!