ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಆಪರೇಷನ್ ಸಿಂದೂರ್ ಕುರಿತು ಅವಹೇಳನವಾಗಿ ಮಾತನಾಡಿದ್ದ ಕೋಲಾರ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ವಿರುದ್ಧ ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನಾಗರಿಕ ಹಕ್ಕು ಹೋರಾಟ ಸಮಿತಿ ಉಪಾಧ್ಯಕ್ಷ ಗಣೇಶ್ ಸಿಂಗ್ ಎಂಬುವರು ದೂರು ನೀಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯ ಪ್ರತೀಕಾರವಾಗಿ ಭಾರತೀಯ ಸೇನೆ ಆಪರೇಷನ್ ಸಿಂದೂರ್ ಕಾರ್ಯಾಚರಣೆ ನಡೆಸಿದೆ. . ಆದರೆ, ಈ ಆಪರೇಷನ್ ಸಿಂದೂರ್ ಕಾರ್ಯಾಚರಣೆ ಕುರಿತು ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ವಿವಾದಾತ್ಮಕವಾಗಿ ಹೇಳಿಕೆ ನೀಡಿದ್ದರು.
ಭಾರತ ಬೂಟಾಟಿಕೆಗೆ ನಾಲ್ಕು ಫ್ಲೈಟ್ ಮೇಲೆ ಕಳುಹಿಸಿದ್ದು ಬಿಟ್ಟರೆ ಏನೂ ಮಾಡಿಲ್ಲ. 26 ಜನ ಮಹಿಳೆಯರ ಅರಶಿನ ಕುಂಕುಮಕ್ಕೆ ಬೆಲೆ ಇಷ್ಟೆಯಾ? ಸಾಮಾನ್ಯ ಪ್ರಜೆಗಳ ಮೇಲೆ ಯುದ್ಧ ಮಾಡುವುದಕ್ಕೆ ನಮ್ಮ ವಿರೋಧವಿದೆ. ಆದರೆ, ನಮ್ಮ ದೇಶದೊಳಗೆ ಬಂದು ಪತ್ನಿಯರ ಎದುರೇ ಪತಿಯರನ್ನು ಹೊಡೆದರೆ ಹೇಗೆ ಸಹಿಸುವುದು? ಆ ಹೆಣ್ಣು ಮಕ್ಕಳು ಗಟ್ಟಿಯಾಗಿರುವುದಕ್ಕೆ ಪರವಾಗಿಲ್ಲ. ಇಲ್ಲಾ ಅಂದರೆ ಹಾರ್ಟ್ ಅಟ್ಯಾಕ್ ಆಗಿ ಸಾಯುತ್ತಿದ್ದರು. ಅಂತಹದಕ್ಕೆ ಪರಿಹಾರ ಇದಲ್ಲ. ಬೇರಿನಿಂದ ಕೊಂಬೆ ತನಕ ಎಲ್ಲವನ್ನೂ ಹೊಡೆಯಬೇಕು. ಈ ಬಾರಿ ಒಳ್ಳೆಯ ಅವಕಾಶ ಇತ್ತು, ಆದರೆ ಏನೂ ಮಾಡಿಲ್ಲ ಎಂಬುದು ಬೇಸರ ತಂದಿದೆ ಎಂದು ವಿವಾದಾತ್ಮ ಹೇಳಿಕೆ ನೀಡಿದ್ದರು.