ಹೊಸದಿಗಂತ ಡಿಜಿಟಲ್ ಡೆಸ್ಕ್:
ತೃಣಮೂಲ ಕಾಂಗ್ರೆಸ್ (TMC) ಸಂಸದೆ ಮಹುವಾ ಮೊಯಿತ್ರಾ (Mahua Moitra) ವಿರುದ್ಧ ಸಂಸತ್ನಲ್ಲಿ ಪ್ರಶ್ನೆ ಕೇಳಲು ಹಣ ಪಡೆದಿದ್ದಾರೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ (Nishikant Dubey) ನೀಡಿದ ದೂರನ್ನು ಲೋಕಸಭೆಯ ನೈತಿಕ ಸಮಿತಿಗೆ (Ethics committee)ನೀಡಿದೆ .
ಅದಾನಿ ಗುಂಪು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿ ಸಂಸತ್ನಲ್ಲಿ ಪ್ರಶ್ನೆ ಕೇಳಲು ಮಹುವಾ ಮೊಯಿತ್ರಾ ಉದ್ಯಮಿ ದರ್ಶನ್ ಹಿರಾನಂದಾನಿ ಅವರಿಂದ ಲಂಚ ಪಡೆದಿದ್ದಾರೆ ಎಂದು ನಿಶಿಕಾಂತ್ ದುಬೆ ಆರೋಪಿಸಿದ್ದಾರೆ.
ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದು, ಮೊಯಿತ್ರಾ ಅವರು ಸಂಸತ್ ಸೌಲಭ್ಯಗಳನ್ನು ಉಲ್ಲಂಘಿಸಿದ್ದು, ಸದನದ ಅವಹೇಳನ ಮತ್ತು ಕ್ರಿಮಿನಲ್ ಪಿತೂರಿ ಮಾಡಿರುವುದಾಗಿ ಆರೋಪಿಸಿದ್ದಾರೆ.
ಏತನ್ಮಧ್ಯೆ, ಯಾವುದೇ ರೀತಿಯ ವಿಚಾರಣೆಯನ್ನು ತಾನು ಸ್ವಾಗತಿಸುತ್ತೇನೆ ಎಂದು ಮೊಯಿತ್ರಾ ಹೇಳಿದ್ದಾರೆ.