ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ ಪಂದ್ಯದ ಸಂಭ್ರಮಾಚರಣೆಯ ವೇಳೆ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಭಾರತದ ಧ್ವಜನವನ್ನು ಮೈಮೇಲೆ ಹಾಕಿಕೊಂಡು ಅಶ್ಲೀಲ ವರ್ತನೆ ತೋರಿದ್ದಾರೆ ಎಂದು ಆರೋಪಿಸಲಾಗಿದೆ.
ಪುಣೆಯ ವಕೀಲರಾದ ವಾಜಿದ್ ಖಾನ್ ಎಫ್‌ಐಆರ್ ದಾಖಲಿಸುವಂತೆ ಕೋರಿ ದೂರು ನೀಡಿದ್ದಾರೆ. ಈ ಕೃತ್ಯವು ಸಂಬಂಧಿತ ಕಾನೂನಿನ ಅಡಿಯಲ್ಲಿ ಅಪರಾಧವಾಗಿದೆ ಮತ್ತು ಕಾನೂನು ಕ್ರಮ ಕೈಗೊಳ್ಳಬೇಕು. ರಾಷ್ಟ್ರ ಧ್ವಜದ ಘನತೆಯನ್ನು ಗೌರವಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದು ದೂರಿನಲ್ಲಿ ಹೇಳಿದ್ದಾರೆ.
ಹಾರ್ದಿಕ್ ಪಾಂಡ್ಯ ಭಾರತದ ಧ್ವಜವನ್ನು ಮೈಮೇಲೆ ಸುತ್ತಿಕೊಂಡ ವೇಳೆ ತನ್ನ ಗೆಳತಿ ಮಹಿಕಾ ಶರ್ಮಾ ಜತೆ ಕಿಸ್ ಮಾಡಿದ್ದರು. ಈ ವರ್ತನೆಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಜನ ಅಸಭ್ಯ ಎಂದಿದ್ದರು.



