ಕರ್ನಾಟಕದಲ್ಲಿದ್ದುಕೊಂಡು ಪಾಕ್‌ ಮೇಲೆ ʼಪ್ಯಾರ್‌ʼ : ವಿದ್ಯಾರ್ಥಿನಿ ವಿರುದ್ಧ ದೂರು ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಹೊವಿಜಯಪುರದ ಅಲ್ ಅಮೀನ್ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ ಪಾಕಿಸ್ತಾನದ ಜನರ ಪರ ಹಾಗೂ ಅವರ ಸುರಕ್ಷತೆ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ದೇಶ ವಿರೋಧಿ ಪೋಸ್ಟ್​​ ಹಂಚಿಕೊಂಡಿದ್ದಾಳೆ. ಇದು ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.

ವಿದ್ಯಾರ್ಥಿನಿ ತಷಾವುದ್ದ ಫಾರೂಖಿ ಶೇಖ್​ ‘@hoodyyyyyyy’ ಎಂಬ ಹೆಸರಿನ ಖಾತೆಯಲ್ಲಿ “ನನ್ನ ಪಾಕಿಸ್ತಾನಿ ಸ್ನೇಹಿತರಿಗೆ, ಐಒಜೆಕೆ, ಎಜೆಕೆ ಜನರು ಸರ್ಕಾರಿ ಮಿಲಿಟರಿ ಸ್ಥಳಗಳಿಗೆ ಹೋಗಬೇಡಿ. ಗಡಿಯಿಂದ 200 ಕಿಲೋ ಮೀಟರ್ ಹೋಗಬೇಡಿ. ಅಲ್ಲಾ ಪಾಕಿಸ್ತಾನ ಹಾಗೂ ನಮ್ಮೆಲ್ಲರನ್ನೂ ಭಾರತದಿಂದ ರಕ್ಷಿಸಲಿ ಅಮೀನ್#sos” ಎಂದು ದೇಶ ವಿರೋಧಿ ಪೋಸ್ಟ್ ಹಂಚಿಕೊಂಡಿದ್ದಾಳೆ. ತನ್ನ ವಾಟ್ಸಾಪ್ ಸ್ಟೇಟಸ್‌ಗಳಲ್ಲಿ ಕೂಡ ಪೋಸ್ಟ್ ಹಾಕಿದ್ದಾಳೆ.

ವಿದ್ಯಾರ್ಥಿನಿ ತಷಾವುದ್ದ ಫಾರೂಖಿ ಶೇಖ್​ ಪೋಸ್ಟ್ ವೈರಲ್​ ಬೆನ್ನಲ್ಲೇ ಆಕೆಯ ವಿರುದ್ಧ ಕಾನೂನು ಕ್ರಮಕ್ಕೆ ಹಿಂದೂ ಪರ ಸಂಘಟನೆಗಳಿಂದ ಒತ್ತಾಯಿಸಲಾಗಿದೆ. ಬಳಿಕ ಪಿಎಸ್ಐ ವಿನೋದ ದೊಡಮನಿಯಿಂದ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಾಗಿದೆ. ಪಾಕ್ ಪರ ಪೋಸ್ಟ್ ಹಾಕಿದ್ದಕ್ಕೆ ದೇಶದ ಸಾರ್ವಭೌಮತ್ವದ ಘನತೆಗೆ ಅಪಾಯಕಾರಿಯಾಗುವ ರೀತಿಯಲ್ಲಿ, ದೇಶದ ಏಕತೆಗೆ ಧಕ್ಕೆ ತರುವಂತಹ ಪೋಸ್ಟ್ ಹಾಕಿದ ಕಾರಣ ದಂತ ವೈದ್ಯಕೀಯ ವಿದ್ಯಾರ್ಥಿನಿ ತಷಾವುದ್ದ ಮೇಲೆ BNS 152. 197.3(5) ಅಡಿ ದೂರು ದಾಖಲಾಗಿದೆ.

ಅತ್ತ ದೂರು ದಾಖಲಾಗುತ್ತಿದ್ದಂತೆ ಇತ್ತ ವಿದ್ಯಾರ್ಥಿನಿ ತಷಾವುದ್ದ ಯೂ ಟರ್ನ್ ಹೊಡೆದಿದ್ದಾಳೆ. “ನನ್ನ ಇನ್‌ಸ್ಟಾಗ್ರಾಂ ಖಾತೆಯಲ್ಲಿನ ನನ್ನ ಕಾಮೆಂಟ್‌ಗೆ ಸಂಬಂಧಿಸಿದೆ ಅದು ಕೆಲವರನ್ನು ನೋಯಿಸಿದೆ. ಮನನೊಂದಿರುವ ಎಲ್ಲರಿಗೂ ನನ್ನ ಹೃದಯದಿಂದ ಕ್ಷಮೆಯಾಚಿಸುತ್ತೇನೆ. ಭಾರತೀಯಳಾದ ನಾನು ನನ್ನ ರಾಷ್ಟ್ರವನ್ನು ಪ್ರೀತಿಸುತ್ತೇನೆ. ಇದು ನನ್ನ ತಾಯ್ನಾಡು. ಭಾರತದಲ್ಲಿ ಹುಟ್ಟಿ ಬೆಳೆದದ್ದು. ನಾನು ಕಮೆಂಟ್ ಮಾಡಿದ್ದು ಮೂರ್ಖತನದ ಕೃತ್ಯವಾಗಿದೆ ಮತ್ತೊಮ್ಮೆ! ನಿಜವಾಗಿಯೂ ಎಲ್ಲರಿಗೂ ಕ್ಷಮೆಯಾಚಿಸುವೆ. ಮುಂದೆ ನಾನು ಎಂದಿಗೂ ಈ ರೀತಿಯ ತಪ್ಪನ್ನು ಮಾಡುವುದಿಲ್ಲ ಎಂದು ಖಚಿತಪಡಿಸಿತ್ತೇನೆ. ಜೈ ಹಿಂದ್” ಎಂದು ಪೋಸ್ಟ್ ಮಾಡಿದ್ದಾಳೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

1 COMMENT

  1. Identify such crooks and keep them away. These venomous creatures are always danger to the society. Isolate them and keep them away.

LEAVE A REPLY

Please enter your comment!
Please enter your name here

error: Content is protected !!