ಹೊಸದಿಗಂತ ಡಿಜಿಟಲ್ ಡೆಸ್ಕ್ :
ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ವಿ ಸೋಮಣ್ಣ ವಿರುದ್ಧ ಕಾಂಗ್ರೆಸ್ ಮುಖಂಡರ ನಿಯೋಗ ದೂರು ನೀಡಿದೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೂರು ನೀಡಿದ್ದಾರೆ.
ವರುಣಾ ಹಾಗೂ ಚಾಮರಾಜನಗರ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ, ಚಾಮರಾಜನಗರ ಜೆಡಿಎಸ್ ಅಭ್ಯರ್ಥಿಗೆ ಆಮಿಷವೊಡ್ಡಿದ್ದಾರೆ. ಇನ್ನು ಚುನಾವಣೆ ಪ್ರಚಾರದ ವೇಳೆ ಅಮಿತ್ ಶಾ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗಲಾಟೆಗಳು, ಘರ್ಷಣೆಗಳು, ಗಲಭೆಗಳು ಹೆಚ್ಚಾಗುತ್ತವೆ ಎಂಬ ಹೇಳಿಕೆ ನೀಡಿದ್ದಾರೆ. ಹೀಗಾಗಿ ವಿ. ಸೊಮಣ್ಣ, ಅಮಿತ್ ಶಾ ವಿರುದ್ಧ ಕಾಂಗ್ರೆಸ್ ನಿಯೋಗ ದೂರು ದಾಖಲಿಸಿದೆ.