ಸಿಎಂ ಸಿದ್ದು, ಜಯಪ್ರಕಾಶ್ ಹೆಗ್ಡೆ ವಿರುದ್ಧ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ವಿರುದ್ಧ ಬಿಜೆಪಿ ನಿಯೋಗ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. ರಾಜಾಜಿನಗರ ಶಾಸಕ ಸುರೇಶ್ ಕುಮಾರ್ ನೇತೃತ್ವದ ಬಿಜೆಪಿ ನಿಯೋಗ ಎರಡು ವಿಷಯಗಳ ಕುರಿತು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.

ಶಾಸಕರನ್ನು ಸೆಳೆಯಲು ಬಿಜೆಪಿ 50 ಕೋಟಿ ಆಮಿಷ ಒಡ್ಡಿದೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ಹಾಗೂ ಉಡುಪಿ-ಚಿಕ್ಕಮಗಳೂರು ಕೋಟ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಪೂಜಾರಿ ಅವರಿಗೆ ಹಿಂದಿ, ಇಂಗ್ಲಿಷ್ ಬರುವುದಿಲ್ಲ ಎಂಬ ಜಯಪ್ರಕಾಶ್ ಹೆಗ್ಡೆ ಹೇಳಿಕೆಗೆ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್‌ಮೀನಾ ಅವರಿಗೆ ದೂರು ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!