ಹೊಸದಿಗಂತ ಡಿಜಿಟಲ್ ಡೆಸ್ಕ್:
ಚುನಾವಣೆ ವೇಳೆ ಆಸ್ತಿ ಕುರಿತಾಗಿ ಸಂಪೂರ್ಣ ಮಾಹಿತಿ ನೀಡದ ಆರೋಪದ ಮೇಲೆ ಸಾಮಾಜಿಕ ಹೋರಾಟಗಾರ ಸಿ.ಎಸ್.ಸಿದ್ದರಾಜು ಎಂಬುವವರು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
2004ರ ವಿಧಾನಸಭಾ ಚುನಾವಣೆ ವೇಳೆ ಕೇತಗಾನಹಳ್ಳಿಯಲ್ಲಿ 24 ಎಕರೆ ಜಮೀನು ಇರುವ ಬಗ್ಗೆ ಅಫಿಡವಿಟ್ ನಲ್ಲಿ ಉಲ್ಲೇಖಿಸಿದ್ದರು. ಚಿಕ್ಕಮ್ಮ ಸಾವಿತ್ರಮ್ಮ ಅವರಿಂದ ಜಮೀನು ದಾನ ಪಡೆದಿದ್ದಾಗಿ ಮಾಹಿತಿ ನೀಡಿದ್ದರು. ಸಾವಿತ್ರಮ್ಮನವರಿಗೆ ಕುಮಾರಸ್ವಾಮಿ ಬೇನಾಮಿಯಾಗಿದ್ದಾರಾ? ತಾಯಿಯ ಸಹೋದರಿಯ ಆದಾಯದ ಮೂಲ ಯಾವುದು? ಪೂರ್ಣ ಪ್ರಮಾಣದ ಮಾಹಿತಿ ನೀಡದೇ ವಂಚಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿರುವ ಹಿನ್ನೆಲೆಯಲ್ಲಿ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಹೋರಾಟಗಾರ ಸಿ.ಎಸ್.ಸಿದ್ಧರಾಜು ಲೋಕಾಯುಕ್ತಕ್ಕೆ ದೂರು ಕೊಟ್ಟಿದ್ದಾರೆ.