ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ವಿಧಾನಸಭಾ ಚುನಾವಣಾ ಹಿನ್ನೆಲೆ ರಾಜ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ನಾಯಕಿ ಸೋನಿಯಾ ಗಾಂಧಿ ಚುನಾವಣಾ ಪ್ರಚಾರ ಕೈಗೊಂಡಿದ್ದರು. ಇದೀಗ ಸೋನಿಯಾ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ದೂರು ನೀಡಿದ್ದಾರೆ.
ಸೋನಿಯಾ ಗಾಂಧಿಯವರು ಪ್ರಚಾರದ ವೇಳೆ ಕನ್ನಡಿಗರ ಬಗ್ಗೆ ಸಂಶಯ ಬರುವ ರೀತಿ ಮಾತನಾಡಿದ್ದಾರೆ. ಅಲ್ಲದೆ ಸಾರ್ವಭೌಮತ್ವದ ವಿರುದ್ಧ ಸೋನಿಯಾ ಗಾಂಧಿಯವರು ಮಾತನಾಡಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.