ಸಿಟಿ ರವಿ ವಿರುದ್ಧ ಮಹಿಳಾ ಆಯೋಗಕ್ಕೆ ದೂರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಜೆಪಿ ಎಂಎಲ್​ಸಿ ಸಿಟಿ ರವಿ ವಿರುದ್ಧ ಮಹಿಳಾ ಆಯೋಗಕ್ಕೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ದೂರು ನೀಡಲಾಗಿದೆ.

ಬೆಳಗಾವಿ ಅಧಿವೇಶನ ನಡೆಯುತ್ತಿದ್ದ ಸುವರ್ಣ ಸೌಧದ ವಿಧಾನ ಪರಿಷತ್ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಕ್ಟರ್ ಅವರಿಗೆ ವಿಧಾನ ಪರಿಷತ್ತಿನ ಸದಸ್ಯ ಸಿ.ಟಿ. ರವಿ ಅವರು ಅಸಭ್ಯ ಮತ್ತು ಅಸಂವಿಧಾನಿಕ ಪದ ಬಳಕೆ ಮಾಡಿ ಅಪಮಾನಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿರುತ್ತದೆ.

ಮಾಜಿ ಮಂತ್ರಿಯಾಗಿದ್ದು, ಹೆಣ್ಣು ಮಕ್ಕಳ ಬಗ್ಗೆ ಅಪಾರ ಕಾಳಜಿ, ಗೌರವ ಹೊಂದಿರಬೇಕಾದ ಜವಾಬ್ದಾರಿ ಸ್ಥಾನದಲ್ಲಿರುವ ವ್ಯಕ್ತಿಯೇ ಘನತವತ್ತ ಸದನದಲ್ಲಿ ಮಹಿಳಾ ಮಂತ್ರಿಯೊಬ್ಬರನ್ನು ಅತೀ ಕೀಳು ಮಟ್ಟದ ಅಸಾಂವಿಧಾನಿಕ ಪದ ಪ್ರಯೋಗ ಮಾಡಿದ್ದರೆ ಅದು ನಾಡಿನ ಇಡೀ ಹೆಣ್ಣು ಕುಲಕ್ಕೇ, ಅವರ ಭಾವನೆಗಳಿಗೆ, ಅವರ ಘನತೆಗೆ ಉಂಟು ಮಾಡಿರುವ ಅಪಮಾನ. ಹಾಗಾಗಿ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕೆಂದು ಕೋರಲಾಗಿದೆ.

 

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!