Saturday, March 25, 2023

Latest Posts

ರಾಜ್ಯಕ್ಕೆ ಪೂರಕವಾದ ಬಜೆಟ್: ಪರಿಷತ್ ಸದಸ್ಯ ಸಿ.ವಿ.ಚಂದ್ರಶೇಖರ್

ಹೊಸದಿಗಂತ ವರದಿ,ಕೊಪ್ಪಳ:

ರಾಜ್ಯಕ್ಕೆ ಪೂರಕವಾದ ಬಜೆಟ್ ಅನ್ನು ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪರಿಷತ್ ಸದಸ್ಯ ಸಿ.ವಿ.ಚಂದ್ರಶೇಖರ್ ಹೇಳಿದರು.
ಆನೆಗುಂದಿಯ ಗಗನ್ ಮಹಲ್ ಸಂರಕ್ಷಣೆಗೆ ಖಾಸಗಿ ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಳ್ಳುವುದಾಗಿ ಬಜೆಟ್‌ನಲ್ಲಿ ಪ್ರಸ್ತಾಪಿಸಲಾಗಿದೆ. ಕಿನ್ನಾಳ ಚಿತ್ರಗಾರ ಅಭಿವೃದ್ಧಿ ಬಗ್ಗೆ ಪ್ರಸ್ತಾಪ ಮಾಡಲಾಗಿದೆ. ಈ ಭಾಗದ ಪ್ರವಾಸೋದ್ಯಮಕ್ಕೆ ಉತ್ತೇಜನೆ ನೀಡಲಾಗಿದೆ ಎಂದರು.
ತುಂಗ‘ದ್ರಾ ಜಲಾಶಯದಲ್ಲಿ ಸಂಗ್ರಹಣಾ ಸಾಮರ್ಥ್ಯದ ಕೊರತೆ ನೀಗಿಸಲು ನವಲಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸಮತೋಲನಾ ಜಲಾಶಯ ಅನುಷ್ಠಾನಕ್ಕೆ ಸರ್ಕಾರ ಬಜೆಟ್‌ನಲ್ಲಿ ಕ್ರಮವಹಿಸುವುದಾಗಿ ತಿಳಿಸಿದ್ದಾರೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ೫ ಸಾವಿರ ಕೋಟಿ ರೂ. ಮೀಸಲಿಡಲಾಗಿದೆ. ಗಿಣಗೇರಿ- ರಾಯಚೂರು ರೈಲ್ವೆ ಮಾರ್ಗ ನಿರ್ಮಾಣಕ್ಕೆ ರಾಜ್ಯ ಸರ್ಕಾರದ ಪಾಲು ನೀಡುವುದಾಗಿ ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!