ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ವರದಿ, ಶಿವಮೊಗ್ಗ:
ನಗರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಮೇ 13 ರಿಂದ 16 ರವೆರೆಗೆ ಪಾಲಿಕೆ ವ್ಯಾಪ್ತಿಯಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತದೆ ಎಂದು ಸಚಿವ ಜೆ.ಎಸ್. ಈಶ್ವರಪ್ಪ ತಿಳಿಸಿದರು.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದಿನೇ ದಿನೇ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದೆ. ಸೋಮವಾರ ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಇದರಿಂದಾಗಿ ಖಡಕ್ ಲಾಕ್ ಡೌನ್ ಮಾಡುವುದು ಅನಿವಾರ್ಯವಾಗಿದೆ. ಈ ದಿನಗಳಲ್ಲಿ ಜನರು ಮನೆಯಿಂದ ಹೊರ ಬರದಂರೆ ಸೂಚನೆ ನೀಡಲಾಗುತ್ತದೆ ಎಂದರು.
ಇದುವರೆಗೆ ಬೆಳಗ್ಗೆ 6 ರಿಂದ 10 ಗಂಟೆವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿತ್ತು. ತರಕಾರಿ ಮಾರುಕಟ್ಟೆ ಇರುತಿತ್ತು. ಆದರೆ ಮುಂದಿನ ನಾಲ್ಕು ದಿನಗಳು ಇರುವುದಿಲ್ಲ. ಗಾಂಧಿ ಬಜಾರ್ ನ ಸಗಟು ದಿನಸಿ ವರ್ತಕರು ಕೂಡ ಬಂದ್ ಮಾಡಲಿದ್ದಾರೆ. ಎಪಿಎಂಸಿ ಮಾರುಕಟ್ಟೆ ತೆರೆಯುವುದಿಲ್ಲ. ಸ್ಥಳೀಯವಾಗಿಯೇ ತರಕಾರಿ ಖರೀದಿ ಮಾಡಿಕೊಳ್ಳಬಹುದಾಗಿದೆ ಎಂದರು.
ಕೈಗಾರಿಕೆಗಳನ್ನು ಸಂಪೂರ್ಣ ಬಂದ್ ಮಾಡಲಾಗುತ್ತದೆ. ಸರ್ಕಾರಿ ಕಚೇರಿಗಳು ಶೇ.50 ರಷ್ಟು ಮಾತ್ರ. ಕಾರ್ಯನಿರ್ವಹಿಸಲಿವೆ. ಹೊರಗಿನಿಂದ ಜಿಲ್ಲೆ ಒಳಗೆ ಬರುವವರಿಗೆ ಸಂಪೂರ್ಣ ನಿರ್ಬಂಧ ವಿಧಿಸಲಾಗುತ್ತದೆ ಎಂದು ಹೇಳಿದರು.