ರಾಜ್ಯದಲ್ಲಿ ಕಮಿಷನ್ ದಂಧೆಗೆ ಸಂಪೂರ್ಣ ಕಡಿವಾಣ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಹೊಸದಿಗಂತ ಡಿಜಿಟಲ್ ಡೆಸ್ಕ್:‌

ಬಿಜೆಪಿ ಸರ್ಕಾರದ ಆರ್ಥಿಕ ಅಶಿಸ್ತು ಮತ್ತು ಕಮಿಷನ್ ಹಾವಳಿಯಿಂದ ಗುತ್ತಿಗೆದಾರರಿಗೆ ಸಮಸ್ಯೆ ಆಗಿದೆ. ಬಿಜೆಪಿ ಹಳಿ ತಪ್ಪಿಸಿರುವ ಆರ್ಥಿಕತೆಯನ್ನು ಸರಿ ಮಾಡಲು ಸ್ವಲ್ಪ ಸಮಯಾವಕಾಶ ಬೇಕು. ನಮ್ಮ ಸರ್ಕಾರದ ಅವಧಿಯಲ್ಲಿ ಕಮಿಷನ್ ದಂಧೆಗೆ ಸಂಪೂರ್ಣ ಕಡಿವಾಣ ಹಾಕುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಈ ಕುರಿತು ಗೃಹ ಕಚೇರಿ ಕೃಷ್ಣದಲ್ಲಿ ಕರ್ನಾಟಕ ರಾಜ್ಯ ಗುತ್ತಿಗೆಗಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ನೇತೃತ್ವದ ನಿಯೋಗವು ಶುಕ್ರವಾರ ಭೇಟಿ ಮಾಡಿ ಬಾಕಿ ಇರುವ ಬಿಲ್ಲುಗಳ ಪಾವತಿಗೆ ಕ್ರಮ ಕೈಗೊಳ್ಳುವಂತೆ ಮನವಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಿದ್ದರಾಮಯ್ಯ, ರಾಜ್ಯದಲ್ಲಿ ಕಮಿಷನ್ ಹಾವಳಿಗೆ ಕಡಿವಾಣ ಹಾಕಿ, ಸ್ಥಳೀಯ ಗುತ್ತಿಗೆದಾರರ ಹಿತಕ್ಕೆ ಧಕ್ಕೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಇನ್ನೂ ಬಜೆಟ್ ಮಂಡನೆಯಾಗಬೇಕಿದೆ. ಬಜೆಟ್ ಅಧಿವೇಶನದ ನಂತರ ಬಿಬಿಎಂಪಿ ಹಾಗೂ ಆರ್ಥಿಕ ಇಲಾಖೆ ಕಾರ್ಯದರ್ಶಿಗಳ ಸಭೆ ಕರೆದು ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದರು.

ಬಿಬಿಎಂಪಿಯಲ್ಲಿ 2000 ಕೋಟಿ ರೂ.ಗಳು ಹಾಗೂ ನಗರೋತ್ಥಾನ ಯೋಜನೆಯಡಿ 1500 ಕೋಟಿ ರೂ.ಗಳು ಬಾಕಿ ಇರುವುದಾಗಿ ತಿಳಿಸಿದ ಕೆಂಪಣ್ಣ ಅವರು ತಡೆಹಿಡಿದಿರುವ ಮೊತ್ತವನ್ನು ಪರಿಶೀಲಿಸಿ ಬಿಡುಗಡೆ ಮಾಡಬೇಕು ಹಾಗೂ ನಿರಾಕ್ಷೇಪಣಾ ಪತ್ರವನ್ನು ಬಿಡುಗಡೆ ಮಾಡಬೇಕೆಂದು ಕೆಂಪಣ್ಣ ಮನವಿ ಮಾಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!